ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ರಾಮಮಂದಿರ, ಕಲಂ 370 ಬಿಜೆಪಿಯ ಅಜೆಂಡ; ಆದರೆ ಅಭಿವೃದ್ಧಿಗೆ ಹೆಚ್ಚಿನ ಗಮನ: ಸದಾನಂದ ಗೌಡ

ರಾಮಮಂದಿರ ನಿರ್ಮಾಣ, ಆರ್ಟಿಕಲ್ 370 ರದ್ದುಗೊಳಿಸುವುದು ಬಿಜೆಪಿಯ ಕಾರ್ಯಸೂಚಿಗಳಾಗಿವೆ ಆದರೆ ಅಭಿವೃದ್ಧಿ ಹಾಗೂ ಉತ್ತಮ ಆಡಳಿತ ವಿಷಯದಲ್ಲಿ ನರೇಂದ್ರ ಮೋದಿ ಸರ್ಕಾರ ಹೆಚ್ಚಿನ ಗಮನ ಹರಿಸುತ್ತಿದೆ

ಸದಾನಂದ ಗೌಡ
Srinivas Rao BV
Updated On : 16 Jun 2015, 7:02 am

ನವದೆಹಲಿ: ರಾಮಮಂದಿರ ನಿರ್ಮಾಣ, ಆರ್ಟಿಕಲ್ 370 ರದ್ದುಗೊಳಿಸುವುದು ಬಿಜೆಪಿಯ ಕಾರ್ಯಸೂಚಿಗಳಾಗಿವೆ ಆದರೆ ದೀರ್ಘ ಸಮಾಲೋಚನೆ ಬಳಿಕ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಕಾನೂನು ಸಚಿವ ಡಿ.ವಿ ಸದಾನಂದ ಗೌಡ ಹೇಳಿದ್ದಾರೆ.

ರಾಮ ಮಂದಿರ ನಿರ್ಮಾಣ, ಆರ್ಟಿಕಲ್ 370 ರದ್ದುಗೊಳಿಸುವುದಕ್ಕಿಂತಲೂ ಕಳೆದ 10 ವರ್ಷಗಳಿಂದ ನಿರ್ಲಕ್ಷ್ಯಕ್ಕೊಳಗಾಗಿದ್ದ ಅಭಿವೃದ್ಧಿ ಹಾಗೂ ಉತ್ತಮ ಆಡಳಿತ ವಿಷಯದಲ್ಲಿ ನರೇಂದ್ರ ಮೋದಿ ಸರ್ಕಾರ ಹೆಚ್ಚಿನ ಗಮನ ಹರಿಸುತ್ತಿದೆ ಎಂದು ಸದಾನಂದ ಗೌಡ ಹೇಳಿದ್ದಾರೆ.

ಆರ್ಟಿಕಲ್ 370 ರದ್ದುಗೊಳಿಸುವುದು ಬಿಜೆಪಿಯ ಪ್ರಣಾಳಿಕೆಯಲ್ಲಿನ ಭರವಸೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅದು ಬಿಜೆಪಿ ಕಾರ್ಯಸೂಚಿ ವಿಷಯವೂ ಆಗಿದೆ ಎಂದು ಈ ಹಿಂದೆಯೇ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿರುವುದಾಗಿ ಸದಾನಂದ ಗೌಡ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರಕ್ಕೆ ನೀಡಲಾಗಿರುವ ವಿಶೇಷ ಸ್ಥಾನಮಾನ ವಾಪಸ್ ಪಡೆಯುವ ಬಗ್ಗೆ ಹಲವು ರಾಜಕೀಯ ಪಕ್ಷಗಳೊಂದಿಗೆ ಸುದೀರ್ಘ ಚರ್ಚೆ ನಡೆಸಬೇಕಿದೆ ಆ ಬಳಿಕವೇ ಅಂತಿಮ ನಿರ್ಧಾರವೆಂದು ಕಾನೂನು ಸಚಿವರು ಸ್ಪಷ್ಟಪಡಿಸಿದ್ದಾರೆ. 
ಸೂಕ್ಷ್ಮ ವಿಚಾರಗಳಲ್ಲಿ ಆತುರದ ನಿರ್ಧಾರ ಕೈಗೊಳ್ಳುವುದಕ್ಕೆ ಸಾಧ್ಯವಿಲ್ಲ, ನಿಧಾನವಾಗಿ ಈ ವಿಷಯಗಳ ಬಗ್ಗೆ ಗಮನ ಹರಿಸುತ್ತೇವೆ, ಆದ್ದರಿಂದ ಬಿಜೆಪಿ ತನ್ನ ಕಾರ್ಯಸೂಚಿ(ಅಜೆಂಡಾ)ಗಳನ್ನು ಮರೆತಿಲ್ಲ. ಕಳೆದ 10  ವರ್ಷಗಳಲ್ಲಿ ಅಭಿವೃದ್ಧಿ ಹಾಗೂ ಉತ್ತಮ ಆಡಳಿತ ಸಂಪೂರ್ಣವಾಗಿ ನಿರ್ಲಕ್ಷ್ಯಕ್ಕೊಳಗಾಗಿದ್ದರಿಂದ ಈಗ ಅದನ್ನು ಪುನಶ್ಚೇತನಗೊಳಿಸುವ ತುರ್ತು ಅಗತ್ಯವಿದೆ ಎಂದು ಸದಾನಂದ ಗೌಡ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments