ಸಾಂದರ್ಭಿಕ ಚಿತ್ರ 
ದೇಶ

ಪಂಜಾಬ್ ಪೊಲೀಸ್ ಎನ್‌ಕೌಂಟರ್‌ಗೆ ಅಕಾಲಿ ದಳದ ನಾಯಕ ಬಲಿ

ಕ್ರಿಮಿನಲ್ ಎಂದು ತಪ್ಪಾಗಿ ಭಾವಿಸಿ ಪಂಜಾಬ್ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಅಕಾಲಿದಳದ ನಾಯಕ ಮುಖ್ ಜೀತ್ ಸಿಂಗ್ ಮುಖಾ ಅವರು ಮೃತಪಟ್ಟಿದ್ದಾರೆ.

ಅಮೃತಸರ: ಕ್ರಿಮಿನಲ್ ಎಂದು ತಪ್ಪಾಗಿ ಭಾವಿಸಿ ಪಂಜಾಬ್ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಅಕಾಲಿದಳದ ನಾಯಕ ಮುಖ್ ಜೀತ್ ಸಿಂಗ್ ಮುಖಾ ಅವರು ಮೃತಪಟ್ಟಿದ್ದಾರೆ.

ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಸಿವಿಲ್ ಡ್ರೆಸ್ ನಲ್ಲಿದ್ದ ಪೊಲೀಸರು ಕಾರಿನೊಳಗಿದ್ದ ಮುಖಾ ಅವರನ್ನು ವಿಚಾರಣೆ ನಡೆಸಿ, ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಮುಖಾ  ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಪೊಲೀಸರು ಗುಂಡು ಹಾರಿಸಿದ ಪರಿಣಾಮ ಅಕಾಲಿ ದಳದ ನಾಯಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕ್ರಿಮಿನಲ್ ಎಂದು ತಪ್ಪಾಗಿ ಭಾವಿಸಿ ನಡೆಸಿದ ಎನ್ ಕೌಂಟರ್ ನಲ್ಲಿ ಮುಖಾ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದು, ತಮಗೆ ಬಂದ ಮಾಹಿತಿಯೊಂದರ ಪ್ರಕಾರ, ನಂಬರ್ ಪ್ಲೇಟ್ ಹೊಂದಿಲ್ಲದ ಐ20 ಕಾರಿನಲ್ಲಿ ಕ್ರಿಮಿನಲ್ ಹೋಗುತ್ತಿದ್ದಾರೆ ಎನ್ನಲಾಗಿತ್ತು. ಆ ಪ್ರಕಾರ ಪೊಲೀಸರು ತಪಾಸಣೆ ಹೋದಾಗ ಮುಖಾ ಕೂಡಾ ಗುಂಡಿನ ದಾಳಿ ನಡೆಸಿದ್ದರು. ಆಗ ನಡೆಸಿದ ಪ್ರತಿದಾಳಿಯಲ್ಲಿ ಮುಖಾ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಮೃತಸರ ಮುನ್ಸಿಪಲ್ ಕಾರ್ಪೋರೇಶನ್ ವಾರ್ಡ್ ನಂ16ರ ಯುವ ಅಕಾಲಿದಳದ ಇನ್ ಚಾರ್ಜ್ ಆಗಿದ್ದ ಮುಖಾ ಅವರನ್ನು ಪೊಲೀಸರು ವ್ಯವಸ್ಥಿತವಾಗಿ ಹತ್ಯೆಗೈದಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!