ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ಮೋದಿ ಹೆಸರಲ್ಲಿ ಬಿಹಾರ ಎಲೆಕ್ಷನ್

ಬಿಹಾರದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯನ್ನು ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲೇ ಬಿಜೆಪಿ ಎದುರಿಸಲಿದೆ. ಈಗಲೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡುವುದಿಲ್ಲ ಎಂದು ಪಕ್ಷದ ಚುನಾವಣಾ ಉಸ್ತುವಾರಿ, ರಸಗೊಬ್ಬರ ಸಚಿವ ಅನಂತ್‍ಕುಮಾರ್ ಹೇಳಿದ್ದಾರೆ...

ನವದೆಹಲಿ: ಬಿಹಾರದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯನ್ನು ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲೇ ಬಿಜೆಪಿ ಎದುರಿಸಲಿದೆ. ಈಗಲೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡುವುದಿಲ್ಲ ಎಂದು ಪಕ್ಷದ ಚುನಾವಣಾ ಉಸ್ತುವಾರಿ, ರಸಗೊಬ್ಬರ ಸಚಿವ ಅನಂತ್‍ಕುಮಾರ್ ಹೇಳಿದ್ದಾರೆ.

ಬಿಹಾರ ರಾಜ್ಯ ರಾಜಕಾರಣದಲ್ಲಿ ಬಿಜೆಪಿಯ ಹಲವಾರು ನಾಯಕರು ಉನ್ನತ ಹುದ್ದೆಯಲ್ಲಿದ್ದು, ಎಲ್ಲರೂ ಸಮರ್ಥರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿಯೇ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ನರೇಂದ್ರ ಮೋದಿ ಅವರು ಬಿಜೆಪಿಯ ಮುಖ. ಹೀಗಾಗಿ ಅವರ ನಾಯಕತ್ವದಲ್ಲಿಯೇ ಮುಂದಡಿ ಇಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈಗಾಗಲೇ ಜೆಡಿಯು, ಆರ್‍ಜೆಡಿ ಮತ್ತು ಕಾಂಗ್ರೆಸ್ ಮೈತ್ರಿಕೂಟದಿಂದ ಮಾಜಿ ಸಿಎಂ ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯೆಂದು ಘೋಷಿಸಲಾಗಿದೆ. ಷರೀಫ್ ಜತೆ ಮೋದಿ ಮಾತುಕತೆ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಗೆ ಕರೆ ಮಾಡಿ ರಂಜಾನ್ ಹಬ್ಬದ ಶುಭ ಕೋರಿದ್ದಾರೆ. ಈ ಮೂಲಕ ಕೆಲವು ದಿನಗಳಿಂದ ಎರಡೂ ದೇಶಗಳ ಮಧ್ಯೆ ನಡೆಯುತ್ತಿದ್ದ ಮಾತಿನ ಸಮರಕ್ಕೆ ತೆರೆ ಎಳೆಯಲು ಪ್ರಯತ್ನಿಸಿದ್ದಾರೆ. ಅಲ್ಲದೆ, ಎರಡೂ ದೇಶಗಳ ಮಧ್ಯೆ ಶಾಂತಿಯುತ ಮತ್ತು ಸ್ನೇಹ ಸಂಬಂಧ ಏರ್ಪಡಬೇಕೂ ಎಂದೂ ಹೇಳಿದ್ದಾರೆ. ಸುಮಾರು ಐದು ನಿಮಿಷ ಕಾಲ ಮಾತನಾಡಿರುವ ಮೋದಿ, ರಂಜಾನ್ ದಿನದಂದು ಭಾರತದ ಬಂಧನದಲ್ಲಿರುವ ಮೀನುಗಾರರ ಬಿಡುಗಡೆ ಮಾಡುವುದಾಗಿಯೂ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT