ಚಂದ್ರಬಾಬು ನಾಯ್ಡು 
ದೇಶ

ಗವರ್ನರ್ ಕಾರ್ಯವೈಖರಿ ಬಗ್ಗೆ ಆಂಧ್ರ ಸಿಎಂ ಅಸಮಾಧಾನ, ವರ್ಗಾವಣೆಗೆ ಪಟ್ಟು

ಆಂಧ್ರಪ್ರದೇಶ ರಾಜ್ಯಪಾಲ ಇ.ಎಸ್.ಎಲ್. ನರಸಿಂಹನ್ ಅವರ ಕಾರ್ಯವೈಖರಿ ಬಗ್ಗೆ, ವಿಶೇಷವಾಗಿ ನೋಟಿಗಾಗಿ ಓಟು ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ...

ಹೈದರಾಬಾದ್: ಆಂಧ್ರಪ್ರದೇಶ ರಾಜ್ಯಪಾಲ ಇ.ಎಸ್.ಎಲ್. ನರಸಿಂಹನ್ ಅವರ ಕಾರ್ಯವೈಖರಿ ಬಗ್ಗೆ, ವಿಶೇಷವಾಗಿ ನೋಟಿಗಾಗಿ ಓಟು ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಸಿಎಂ ಎನ್.ಚಂದ್ರಬಾಬು ನಾಯ್ಡು ಅವರು ತೀವ್ರ ಅಸಮಾಧಾನ ವ್ಯಕ್ಯಪಡಿಸಿದ್ದಾರೆ.

ನೋಟಿಗಾಗಿ ಓಟು ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಹಾಗೂ ಆಂಧ್ರಪ್ರದೇಶ ನಡುವಿನ ಜಟಾಪಟಿ ಮತ್ತಷ್ಟು ತೀವ್ರಗೊಂಡಿರುವ ಬೆನ್ನಲ್ಲೇ ಚಂದ್ರಬಾಬು ನಾಯ್ಡು ಅವರು, ರಾಜ್ಯಪಾಲ ನರಸಿಂಹನ್ ಅವರನ್ನು ಬೆರೆಕಡೆ ವರ್ಗಾ ಮಾಡಿ, ಒಪ್ಪಿಗೆಯಾಗುವಂತಹ ಹಾಗೂ ಆಂಧ್ರ ಮತ್ತು ತೆಲಗಾಂಣ ಎರಡೂ ರಾಜ್ಯಗಳ ಮಧ್ಯೆ ಶಾಂತಿ ನೆಲೆಸುವಂತೆ ಮಾಡುವ ವ್ಯಕ್ತಿಯನ್ನು ನೇಮಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ, ನಾಯ್ಡು ಅವರು ನೋಟಿಗಾಗಿ ಓಟು ಹಾಗೂ ತೆಲಂಗಾಣ ಸರ್ಕಾರದಿಂದ ಆಂಧ್ರ ಸಚಿವರ ದೂರವಾಣಿ ಕದ್ದಾಲಿಕೆ ಪ್ರಕರಣದಲ್ಲಿ ರಾಜ್ಯಪಾಲರು ವ್ಯವಹರಿಸಿದ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

'ನಾವು ಎಲ್ಲಾ ವಿಷಯಗಳನ್ನು ರಾಜ್ಯಪಾಲರ ಗಮನಕ್ಕೆ ತರುತ್ತಿದ್ದೇವೆ. ಅಲ್ಲದೆ ತಾರತಮ್ಯ ಮಾಡಬೇಡಿ ಎಂದು ಮನವಿ ಮಾಡಿದ್ದೇವೆ. ಆದರೂ ಅವರು ಆಂಧ್ರ ಮತ್ತು ತೆಲಂಗಾಣ ಎರಡೂ ರಾಜ್ಯಗಳ ವಿಚಾರದಲ್ಲಿ ಒಂದೇ ರೀತಿಯಾಗಿ ನಡೆದುಕೊಳ್ಳುತ್ತಿಲ್ಲ' ಎಂದು ನಾಯ್ಡು ಹೇಳಿದ್ದಾರೆ.

ಈ ಮಧ್ಯೆ, ತಮ್ಮ ಹಾಗೂ ತಮ್ಮ ಸಚಿವ ಸಂಪುಟ ಸದಸ್ಯರ ರಕ್ಷಣೆಗಾಗಿ ಎರಡೂ ರಾಜ್ಯಗಳ ರಾಜಧಾನಿಯಾಗಿರುವ ಹೈದರಾಬಾದ್‌ನಲ್ಲಿ ಆಂಧ್ರ ಪೊಲೀಸರನ್ನು ನಿಯೋಸುವ ನಾಯ್ಡು ಅವರ ತೀರ್ಮಾನ ಮಾಡಿದ್ದು, ಈ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯಪಾಲ ನರಸಿಂಹನ್ ಅವರು ಆಂಧ್ರ ಮುಖ್ಯ ಕಾರ್ಯದರ್ಶಿ ಐ.ವೈ.ಆರ್ ಕೃಷ್ಣರಾವ್ ಮತ್ತು ಡಿಜಿಪಿ ಜೆ.ವಿ.ರಾಮುಡು ಅವರಿಂದ ಮಾಹಿತಿ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ