ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪಾಕ್ ಪ್ರಧಾನಿ(ಸಾಂದರ್ಭಿಕ ಚಿತ್ರ) 
ದೇಶ

ಪಾಕಿಸ್ತಾನದ 88 ಮೀನುಗಾರರನ್ನು ಬಿಡುಗಡೆ ಮಾಡಲಿರುವ ಭಾರತ

ನವದೆಹಲಿ: ಪಾಕಿಸ್ತಾನಕ್ಕೆ ಭಾರತ ಸರ್ಕಾರ ರಂಜಾನ್ ಗಿಫ್ಟ್ ನೀಡಲಿದ್ದು ಸೌಹಾರ್ದ ಸೂಚಕವಾಗಿ ಪಾಕಿಸ್ತಾನದ 88 ಮೀನುಗಾರರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ.

ಭಾರತ ಸರ್ಕಾರದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಗೆ ತಿಳಿಸಿದ್ದಾರೆ. ರಂಜಾನ್ ಶುಭಾಷಯ ಕೋರಲು ಮಂಗಳವಾರ ಪಾಕಿಸ್ತಾನದ ಪ್ರಧಾನಿಗೆ ಕರೆ ಮಾಡಿದ್ದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನ ಮೀನುಗಾರರನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಭಾರತದಲ್ಲಿರುವ ಪಾಕಿಸ್ತಾನ ಹೈಕಮಿಷನರ್ ಗೂ ಮಾಹಿತಿ ನೀದಲಾಗಿದ್ದು ಬಿಡುಗಡೆ ಪ್ರಕ್ರಿಯೆ ಚಾಲ್ತಿಯಲ್ಲಿದೆ.  ಪಾಕಿಸ್ತಾನ ಹಾಗೂ ಭಾರತದ ನಡುವೆ ಶಾಂತಿಯುತ ಮತ್ತು ಸ್ನೇಹ ದ್ವಿಪಕ್ಷೀಯ ಸಂಬಂಧಗಳ ಅಗತ್ಯತೆಯನ್ನು ಪಾಕ್ ಪ್ರಧಾನಿ ನವಾಜ್ ಷರೀಫ್ ಗೆ ತಿಳಿಸಿದ್ದಾರೆ.

ಇದೇ ವೇಳೆ ಪಾಕಿಸ್ತಾನವೂ ಸೌಹಾರ್ದ ಸೂಚಕವಾಗಿ ಜೂ.18 ರಂದು 113  ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದೆ. ಬಿಡುಗಡೆಯಾಗಿರುವ ಮೀನುಗಾರರನ್ನು ಜೂ.19 ರಂದು ವಾಘಾ ಗಡಿ ಪ್ರದೇಶದಲ್ಲಿ ಭಾರತದ ಅಧಿಕಾರಿಗಳಿಗೆ ಹಸ್ತಾಂತರಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಡವರಿಗೆ 5 ಲಕ್ಷ ಉಚಿತ ಸೈಟ್, ರೈತ ಚೈತನ್ಯ: 100 ದಿನಗಳ ಆಡಳಿತ ಪೂರೈಸಿದ ಡಿ ಕೆ ಶಿವಕುಮಾರ್ ಸರ್ಕಾರದಿಂದ ಬಂಪರ್ ಗಿಫ್ಟ್ ಘೋಷಣೆ; Video

ರಾಮನಗರ: KPS ಶಾಲೆಯಲ್ಲಿ ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಕ್ಲಾಸ್​ರೂಮ್, ಪೀಠೋಪಕರಣ ಭಸ್ಮ!

"ನಾನು ಕಾಕ್ರೋಚ್ ಯಾಗಬೇಕೇನೋ": ಭಾರತೀಯ ಸರ್ಕಾರದಿಂದ ಅನ್ಯಾಯಕ್ಕೆ ಒಳಗಾಗಿದ್ದೇನೆ, ಪ್ರಚಾರದ ಸಾಧನ'ವಾಗಿ ಬಳಕೆ- ವಿಜಯ್ ಮಲ್ಯ!

Duleep Trophy 2026: ಫೈನಲ್ ಪಂದ್ಯ ಡ್ರಾ ಆದ್ರೂ, East Zone ಗೆ ಒಲಿದ ಪ್ರಶಸ್ತಿ.. ಆಗಿದ್ದೇನು?

‘ಭಾರತ ನಡೆಯುವುದು ಸಂವಿಧಾನದಿಂದಲೇ ಹೊರತು ಬಹಿಷ್ಕಾರದಿಂದಲ್ಲ’: ಹಿಂದು-ಮುಸ್ಲಿಂ ಒಗ್ಗಟ್ಟಿಗೆ ಅಠಾವಳೆ ಕರೆ, ಗರ್ಬಾ ಉತ್ಸವದಲ್ಲಿ ಮುಸ್ಲಿಮರ ನಿಷೇಧಕ್ಕೆ ವಿರೋಧ..!