ಉತ್ತರಪ್ರದೇಶದ ಆರ್ಯನ್ ಹೋಟೆಲ್ ನಲ್ಲಿ ಬೆಂಕಿ: 10 ಜನರ ಸಜೀವ ದಹನ, 12 ಗಾಯ (ಸಾಂದರ್ಭಿಕ ಚಿತ್ರ) 
ದೇಶ

ಉತ್ತರಪ್ರದೇಶದ ಆರ್ಯನ್ ಹೋಟೆಲ್ ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಉತ್ತರಪ್ರದೇಶದ ಪ್ರತಾಪ್ಘರ್ ನಲ್ಲಿರುವ ಆರ್ಯನ್ ಹೋಟೆಲ್ ನಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ದುರಂತದಲ್ಲಿ 10 ಮಂದಿ ಸಜೀವ ದಹನವಾಗಿದ್ದು, 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ...

ಅಲಹಾಬಾದ್: ಉತ್ತರಪ್ರದೇಶದ ಪ್ರತಾಪ್ಘರ್ ನಲ್ಲಿರುವ ಆರ್ಯನ್ ಹೋಟೆಲ್ ನಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ದುರಂತದಲ್ಲಿ 10 ಮಂದಿ ಸಜೀವ ದಹನವಾಗಿದ್ದು, 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಇಂದು ಬೆಳಿಗ್ಗೆ 5 ರ ಸುಮಾರಿಗೆ ಇದ್ದಕ್ಕಿದ್ದತೆ ಹೋಟೆಲ್ ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಇದರ ಪರಿಣಾಮ ಹೋಟೆಲ್ ನಲ್ಲಿದ್ದ 10 ಮಂದಿ ಸ್ಥಳದಲ್ಲಿಯೇ ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಅಥಿಕಾರಿಗಳು ತಿಳಿಸಿದ್ದಾರೆ.

ಹೋಟೆಲ್ ನಲ್ಲಿ 40 ರಿಂದ 50ಕ್ಕೂ ಹೆಚ್ಚು ಮಂದಿ ಇದ್ದು, ಘಟನೆಗೆ ಈ ವರೆಗೂ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಿಮಿಸಿರುವ ಅಗ್ನಿ ಶಾಮಕ ದಳದ ವಾಹನಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮೃತ ವ್ಯಕ್ತಿಗಳ ಗುರುತು ಈ ವರೆಗೂ ಪತ್ತೆಯಾಗಿಲ್ಲ ಎಂದು ಹೇಳಲಾಗುತ್ತಿದೆ.

ಘಟನೆ ಕುರಿತಂತೆ ಈಗಾಗಲೇ ಪ್ರತಿಕ್ರಿಯೆ ನೀಡಿರುವ ಉತ್ತರಪ್ರದೇಶ ಸರ್ಕಾರ ಮೃತರ ಕುಟುಂಬಕ್ಕೆ 2ರುಪಾಯಿ ಪರಿಹಾರ ಘೋಷಿಸಿದೆ ಎಂದು ತಿಳಿದುಬಂದಿದೆ.

ಮತ್ತಷ್ಟು ಮಾಹಿತಿಗಾಗಿ ನಿರೀಕ್ಷಿಸಲಾಗಿದೆ...

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!