ವಸುಂಧರಾ ರಾಜೇ 
ದೇಶ

ಲಲಿತ್ ಮೋದಿ ವಿವಾದ: ಪಂಜಾಬ್ ಪ್ರವಾಸ ರದ್ದುಗೊಳಿಸಿದ ರಾಜೇ

ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಅವರೊಂದಿಗೆ ವ್ಯಾವಹಾರಿಕ ಸಂಬಂಧ ಹೊಂದಿದ ಆರೋಪ ಎದುರಿಸುತ್ತಿರುವ ರಾಜಸ್ಥಾನ ಮುಖ್ಯಮಂತ್ರಿ...

ಜೈಪುರ: ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಅವರೊಂದಿಗೆ ವ್ಯಾವಹಾರಿಕ ಸಂಬಂಧ ಹೊಂದಿದ ಆರೋಪ ಎದುರಿಸುತ್ತಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಪಂಜಾಬ್ ಪ್ರವಾಸವನ್ನು ದಿಢೀರ್ ರದ್ದು ಮಾಡಿದ್ದಾರೆ.

ರಾಜೇ ಅವರು ಇಂದು ಪಂಜಾಬ್‌ನ ಆನಂದಪುರಕ್ಕೆ ತೆರಳಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಬೇಕಿತ್ತು. ಆದರೆ ತಮ್ಮಿಂದ ಅಮಿತ್ ಶಾ ಅವರಿಗೆ ಮುಜುಗರವಾಗಬಹುದು ಎಂಬ ಕಾರಣದಿಂದ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ.

'ಬೆನ್ನು ನೋವಿನ ಹಿನ್ನೆಲೆಯಲ್ಲಿ ವೈದ್ಯರು ಮುಖ್ಯಮಂತ್ರಿಗಳಿಗೆ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದು, ಅವರು ಪಂಜಾಬ್ ಪ್ರವಾಸವನ್ನು ರದ್ದುಗೊಳಿಸಿದ್ದಾರೆ' ಎಂದು ರಾಜೇ ಅವರ ಮಾಧ್ಯಮ ಸಲಹೆಗಾರರು ತಿಳಿಸಿದ್ದಾರೆ.

ಲಲಿತ್ ಮೋದಿ ಜತೆಗಿನ ವಸುಂಧರಾ ರಾಜೇ ಅವರ ಸಾಮೀಪ್ಯ ಮತ್ತು ವ್ಯಾವಹಾರಿಕ ಸಂಬಂಧಗಳು ಈಗ ರಾಜೇ ಅವರ ನೆತ್ತಿ ಮೇಲಿನ ತೂಗುಕತ್ತಿಯಾಗಿ ಪರಿಣಮಿಸಿದ್ದು, ರಾಜೇ ಅವರನ್ನು ವಜಾ ಮಾಡಲು ಬಿಜೆಪಿ ಚಿಂತನೆ ನಡೆಸುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT