ಹಳಿ ತಪ್ಪಿದ ಕೊಯಂಬತ್ತೂರು ಶತಾಬ್ದಿಎಕ್ಸ್ ಪ್ರೆಸ್
ಕೊಯಂಬತ್ತರಿನ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನ 5 ಬೋಗಿಗಳು ಇದ್ದಕ್ಕಿದ್ದಂತೆ ಹಳಿತಪ್ಪಿ ಅಪಘಾತಕ್ಕೀಡಾಗಿರುವ ಘಟನೆ ಚೆನ್ನೈನಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ...
ಕೊಯಂಬತ್ತೂರು: ಕೊಯಂಬತ್ತರಿನ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನ 5 ಬೋಗಿಗಳು ಇದ್ದಕ್ಕಿದ್ದಂತೆ ಹಳಿತಪ್ಪಿ ಅಪಘಾತಕ್ಕೀಡಾಗಿರುವ ಘಟನೆ ಚೆನ್ನೈನಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಕೊಯಂಬತ್ತೂರಿನ ಶತಾಬ್ದಿ ಎಕ್ಸ್ ಪ್ರೆಸ್ ರೈಲು ಇಂದು ಬೆಳಿಗ್ಗೆ 7.15 ರ ಸುಮಾರಿಗೆ ಹೊರಡಬೇಕಿತ್ತು. ಆದರೆ, ಕಾರಣಾಂತರಿಗಳಿಂದ ರೈಲು ಹೊರಡುವ ಸಮಯವನ್ನು 10.30ಕ್ಕೆ ಮುಂದೂಡಲಾಗಿತ್ತು. ಇದರಂತೆ ಇಂದು ಬೆಳಿಗ್ಗೆ ರೈಲು ಹೊರಡಲು ಪ್ರಾರಂಭಿಸಿದಾಗ ಖಾಲಿ ಇದ್ದ 5 ಬೋಗಿಗಳು ಇದ್ದಕ್ಕಿದ್ದಂತೆ ಹಳಿ ತಪ್ಪಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿಗಳು ಸಂಭವಿಸಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ರೈಲ್ವೆ ಇಲಾಖೆಯ ಅಧಿಕಾರಿಗಳು ಸ್ಥಳಪರಿಶೀಲನೆ ನಡೆಸುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.