ಕಳ್ಳಭಟ್ಟಿಗೆ ಬಲಿಯಾದ ಕುಟಂಬದವರ ಆಕ್ರಂದನ 
ದೇಶ

ಕಳ್ಳಬಟ್ಟಿ ದುರಂತ: ಮೃತರ ಸಂಖ್ಯೆ 84ಕ್ಕೆ ಏರಿಕೆ

ಇಲ್ಲಿನ ಸ್ಲಮ್ ನಲ್ಲಿ ಕಳ್ಳಭಟ್ಟಿ ಸೇವಿಸಿ ಮೃತಪಟ್ಟವರ ಸಂಖ್ಯೆ 84ಕ್ಕೇರಿದೆ. ಇನ್ನೂ 20 ಮಂದಿ ಪರಿಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ,

ಮುಂಬೈ: ಇಲ್ಲಿನ ಸ್ಲಮ್ ನಲ್ಲಿ ಕಳ್ಳಭಟ್ಟಿ ಸೇವಿಸಿ ಮೃತಪಟ್ಟವರ ಸಂಖ್ಯೆ 84ಕ್ಕೇರಿದೆ. ಇನ್ನೂ 34 ಮಂದಿ ಪರಿಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ, ಘಟನೆ ಸಂಬಂಧ ಎಂಟು ಪೊಲೀಸರನ್ನು ಸರ್ಕಾರ ಅಮಾನತು ಮಾಡಿದೆ.

ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 84ಕ್ಕೆ ಏರಿಕೆಯಾಗಿದ್ದು, ನಗರ 8 ವಿವಿಧ ಆಸ್ಪತ್ರೆಗಳಲ್ಲಿ 34 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮುಂಬೈ  ಪೊಲೀಸ್ ವಕ್ತಾರ ಧನಂಜಯ್ ಕುಲಕರ್ಣಿ ಅವರು ತಿಳಿಸಿದ್ದಾರೆ.

ಮಲಾಡ್‍ನ ಲಕ್ಷ್ಮಿ ನಗರ ಸ್ಲಮ್ ಪ್ರದೇಶದ ಸಮೀಪ ಇರುವ ಗಾಮ್ದೇವಿ ಜುರಾಸಿಕ್ ಪಾರ್ಕ್‍ನಲ್ಲಿ ಗುರುವಾರ ರಾತ್ರಿ ಕಳ್ಳಭಟ್ಟಿ ವಿತರಿಸಲಾಗಿತ್ತು. ಈ ವೇಳೆ ಅಸ್ವಸ್ಥರಾದ 13 ಮಂದಿ ರಾತ್ರಿಯೇ ಮೃತಪಟ್ಟಿದ್ದರು. ಶುಕ್ರವಾರ ಸಂಜೆ ವೇಳೆಗೆ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೆ 40 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿ ನಿಲಕ್ಷ್ಯ ತೋರಿದ ಕಾರಣ ಮಾಲ್ವಾನಿ ಠಾಣೆಯ ಹಿರಿಯ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಏಳು ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ. ಇದಲ್ಲದೆ ಘಟನೆಗೆ ಸಂಬಂಧಿಸಿ ಮೂವರು ಆರೋಪಿಗಳನ್ನೂ ಬಂಧಿಸಲಾಗಿದೆ.

ಇವರು ಕಳ್ಳಭಟ್ಟಿಯನ್ನು ಠಾಣೆಯಿಂದ ವಸಂತ್ ವಿಹಾರ್ ಪ್ರದೇಶಕ್ಕೆ ಸಾಗಣೆ ಮಾಡಿದ್ದರು. ಉಳಿದ ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ. ಏತನ್ಮಧ್ಯೆ, ಘಟನೆಯ ಸಮಗ್ರ ತನಿಖೆ ನಡೆಸಿ ಇನ್ನೆರೆಡು ದಿನದೊಳಗೆ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಆದೇಶಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT