ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಯೋಗ ದಿನ: ರಾಜ್‌ಪಥ್‌ ಮೇಲೆ ಹಾರುವ ವಸ್ತುಗಳಿಂದ ದಾಳಿ, ಐಬಿ ಎಚ್ಚರಿಕೆ

ದೆಹಲಿಯ ರಾಜ್‌ಪಥ್‌ ನಲ್ಲಿ ನಾಳೆ ನಡೆಯುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂದರ್ಭದಲ್ಲಿ ಭಯೋತ್ಪಾದಕರು ವಾಯುದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ...

ಯೋಗ
Vishwanath S
Updated On : 20 Jun 2015, 4:46 am

ನವದೆಹಲಿ: ದೆಹಲಿಯ ರಾಜ್‌ಪಥ್‌ ನಲ್ಲಿ ನಾಳೆ ನಡೆಯುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂದರ್ಭದಲ್ಲಿ ಭಯೋತ್ಪಾದಕರು ವಾಯುದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ.

ರಾಜ್ ಪಥ್ ಮೇಲೆ ಬಲೂನ್‌, ಗಾಳಿಪಟ ಮುಂತಾದ ಹಾರುವ ವಸ್ತುಗಳ ಮೂಲಕ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ ಕಟ್ಟೆಚ್ಚರ ವಹಿಸುವಂತೆ ಗುಪ್ತಚರ ಇಲಾಖೆ ರಕ್ಷಣಾ ಅಧಿಕಾರಿಗಳಿಗೆ ಎಚ್ಚರಿಸಿದೆ.

ಗುಪ್ತಚರ ಇಲಾಖೆ ಎಚ್ಚರಿಕೆ ಹಿನ್ನೆಲೆ ಕಾರ್ಯಕ್ರಮದ ವೇಳೆ ಗಾಳಿಪಟ, ಬಲೂನ್‌, ಗ್ಲೈಡರ್‌, ಮೈಕ್ರೊಲೈಟ್‌ ಮುಂತಾದ ಯಾವುದೇ ವಸ್ತುಗಳ ಹಾರಾಟವನ್ನು ದೆಹಲಿ ಪೊಲೀಸರು ನಿಷೇಧಿಸಿದ್ದಾರೆ. ಇದಲ್ಲದೇ, ಮೇಲಿಂದ ಚಿತ್ರಗಳನ್ನು ತೆಗೆಯಲು ಡ್ರೋನ್‌ ಕ್ಯಾಮರಾಗಳನ್ನು ಬಳಸದಂತೆ ಸೂಚಿಸಲಾಗಿದೆ.

ಯೋಗಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಸಂಸದರು, ರಾಜತಾಂತ್ರಿಕರು, ಅಧಿಕಾರಿಗಳು, ಸಾರ್ವಜನಿಕರು ಸೇರಿ 40,000 ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು. ಭದ್ರತೆಗಾಗಿ ದೆಹಲಿ ಪೊಲೀಸರು ಸೇರಿ ಸಶಸ್ತ್ರ ಪಡೆಯ 5,000 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments