ದೆಹಲಿ ವಿವಿ ಪ್ರಾದ್ಯಾಪಕನಿಂದ ವಿದ್ಯಾರ್ಥಿನಿಗೆ 2 ವರ್ಷದಿಂದ ಲೈಂಗಿಕ ಕಿರುಕುಳ
ದೆಹಲಿ ವಿಶ್ವವಿದ್ಯಾನಿಲಯದ ಸೇಂಟ್ ಸ್ಟೀಫನ್ ಕಾಲೇಜಿನ ಸಹಾಯಕ ಪ್ರಾದ್ಯಾಪಕರೊಬ್ಬರು ಸತತ ಎರಡು ವರ್ಷಗಳಿಂದ ವಿದ್ಯಾರ್ಥಿನಿಗೆ ...
ನವದೆಹಲಿ: ದೆಹಲಿ ವಿಶ್ವವಿದ್ಯಾನಿಲಯದ ಸೇಂಟ್ ಸ್ಟೀಫನ್ ಕಾಲೇಜಿನ ಸಹಾಯಕ ಪ್ರಾದ್ಯಾಪಕರೊಬ್ಬರು ಸತತ ಎರಡು ವರ್ಷಗಳಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ರಸಾಯನ ಶಾಸ್ತ್ರ ಪ್ರಾಧ್ಯಾಪಕ ಸತೀಶ್ ಕುಮಾರ್ ಕಳೆದ 2 ವರ್ಷಗಳಿಂದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾರೆ. ಅಕ್ಟೋಬರ್ 2013 ರಿಂದ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ದೂರಲಾಗಿದೆ.
ಸೆಕ್ಷನ್ 354 ರ ಅಡಿಯಲ್ಲಿ ಸತೀಶ್ ಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಇನ್ನು ಈ ಪ್ರಕರಣದಿಂದ ತೀವ್ರ ಮುಜುಗರಕ್ಕೊಳಗಾಗಿರುವ ದೆಹಲಿ ವಿಶ್ವವಿದ್ಯಾನಿಲಯ ಶಿಕ್ಷಕರ ಸಂಘ ಸತೀಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿದೆ.
ಕಾಲೇಜು ಪ್ರಾಂಶುಪಾಲ ವಲ್ಸನ್ ತಂಪ್ ಸತೀಶ್ ಕುಮಾರ್ ಅವರನ್ನು ರಕ್ಷಿಸಲು ಯತ್ನಿಸಿದರು ಎಂದು ಆಕೆ ದೂರಿನಲ್ಲಿ ವಿವರಿಸಿದ್ದಾಳೆ. ಜೊತೆಗೆ ತನ್ನ ಪಿಎಚ್ ಡಿ ಪದವಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಹಕರಿಸಬೇಕೆಂದು ಆಕೆ ಮನವಿ ಕೊಂಡಿದ್ದಾಳೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.