ಅಫ್ಘಾನಿಸ್ತಾನದಲ್ಲಿ ಬಾಂಬ್ ಸ್ಫೋಟ; 19 ಸಾವು
ಅಫ್ಘಾನಿಸ್ತಾನದ ರಸ್ತೆ ಬದಿಯಲ್ಲಿರಿಸಿದ್ದ ಬಾಂಬ್ ಸ್ಫೋಟಗೊಂಡು 19 ಜನರು ಸಾವಿಗೀಡಾಗಿದ್ದಾರೆ. ಒಂದೇ ಕುಟುಂಬಕ್ಕೆ ಸೇರಿದವರು ಈ ಬಾಂಬ್ ಸ್ಫೋಟದಲ್ಲಿ...
ಕಾಬೂಲ್ : ಅಫ್ಘಾನಿಸ್ತಾನದ ರಸ್ತೆ ಬದಿಯಲ್ಲಿರಿಸಿದ್ದ ಬಾಂಬ್ ಸ್ಫೋಟಗೊಂಡು 19 ಜನರು ಸಾವಿಗೀಡಾಗಿದ್ದಾರೆ. ಒಂದೇ ಕುಟುಂಬಕ್ಕೆ ಸೇರಿದವರು ಈ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಸಾವಿಗೀಡಾದವರಲ್ಲಿ 9 ಮಕ್ಕಳು ಹಾಗು 8 ಮಹಿಳೆಯರು ಇದ್ದಾರೆ. 5 ಜನರಿಗೆ ಗಾಯಗಳಾಗಿವೆ.
ಬಾಂಬ್ ಸ್ಫೋಟದ ಹೊಣೆಯನ್ನು ಇಲ್ಲಿವರೆಗೆ ಯಾರೂ ಹೊತ್ತುಕೊಂಡಿಲ್ಲ. ತಾಲೀಬಾನ್ ಉಗ್ರರೇ ಈ ದಾಳಿಯಲ್ಲಿ ಕೈವಾಡ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ.
ಅಫ್ಘಾನ್ ಸೈನಿಕರ ವಾಹನವನ್ನು ಗುರಿಯಾಗಿರಿಸಿ ಈ ಬಾಂಬ್ ಸ್ಫೋಟ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.