ಕಾಬೂಲ್ ಸ್ಫೋಟ 
ದೇಶ

ಅಫ್ಘಾನಿಸ್ತಾನ್ ಸಂಸತ್ ದಾಳಿ: 7 ಉಗ್ರರ ಹತ್ಯೆ

ಅಫ್ಘಾನಿಸ್ತಾನದಲ್ಲಿ ಪದೇ ಪದೇ ದಾಳಿ ನಡೆಸುತ್ತಿರುವ ಉಗ್ರರು ಇಂದು ಸಂಸತ್ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದ 7 ಮಂದಿ ಉಗ್ರರನ್ನು ರಕ್ಷಣಾ ಪಡೆ ಹೊಡೆದುರುಳಿಸಿದೆ...

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಪದೇ ಪದೇ ದಾಳಿ ನಡೆಸುತ್ತಿರುವ ಉಗ್ರರು ಇಂದು ಸಂಸತ್ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದ 7 ಮಂದಿ ಉಗ್ರರನ್ನು ರಕ್ಷಣಾ ಪಡೆ ಹೊಡೆದುರುಳಿಸಿದೆ. 
ಸಂಸತ್ ಭವನದ ಒಳಗೆ ನುಗಿದ್ದ ಉಗ್ರರು ಸುಮಾರು 9 ಕಡೆ ಬಾಂಬ್ ಸ್ಫೋಟಿಸಿದ್ದಾರೆ. ಅಲ್ಲದೆ ಸಂಸತ್ ಸುತ್ತಮುತ್ತಲಿನ ಕಟ್ಟಡಗಳ ಮೇಲೆ ನಿಂತು ರಕ್ಷಣಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ರಕ್ಷಣಾ ಪಡೆಗಳು ಗುಂಡಿನ ದಾಳಿ ನಡೆಸಿದ್ದಾರೆ. 
ಸದ್ಯ ಸಂಸತ್ ಆವರಣದಿಂದ ಸಂಸದರು ಹಾಗೂ ಪತ್ರಕರ್ತರನ್ನು ಸುರಕ್ಷಿತವಾಗಿ 
ಸ್ಥಳಾಂತರ ಮಾಡಲಾಗಿದೆ. ಆತ್ಮಾಹುತಿ ಬಾಂಬ್ ದಾಳಿಯ ಹೊಣೆಯನ್ನು ತಾಲಿಬಾನ್ ಉಗ್ರ ಸಂಘಟನೆ ಹೊತ್ತಿಕೊಂಡಿದೆ. ಸದ್ಯ ಸಂಸತ್ ಆವರಣದಲ್ಲಿ ಉಗ್ರರು ಹಾಗೂ ರಕ್ಷಣಾ ಪಡೆಗಳ ಮಧ್ಯೆ ಗುಂಡಿನ ಚಕಮಿಕಿ ನಡೆಯುತ್ತಿದೆ. 
ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಏಳು ಮಂದಿ ಉಗ್ರರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮತ್ತೆ ಹಲವು ಸಂಸದರಿಗೆ ಗಾಯಗಳಾಗಿವೆ. ಸದ್ಯ ಸಂಸತ್ ಭವನದ ಸುತ್ತ ದಟ್ಟ ಹೊಗೆ ಆವರಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!