ಸುಪ್ರೀಂ ಕೋರ್ಟ್ 
ದೇಶ

ಪತ್ರಕರ್ತನ ಹತ್ಯೆ ಪ್ರಕರಣ: ಉ.ಪ್ರದೇಶ, ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಸಹಜಾನಪುರ ಮೂಲದ ಪತ್ರಕರ್ತ ಜಗೇಂದ್ರ ಸಿಂಗ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಅಖಿಲೇಶ್ ಯಾದವ್...

ನವದೆಹಲಿ: ಸಹಜಾನಪುರ ಮೂಲದ ಪತ್ರಕರ್ತ ಜಗೇಂದ್ರ ಸಿಂಗ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಅಖಿಲೇಶ್ ಯಾದವ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರಕ್ಕೆ ಹಾಗೂ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಉತ್ತರ ಪ್ರದೇಶ ಸಚಿವನ ಅಕ್ರಮಗಳ ಬಗ್ಗೆ ಬರೆದಿದ್ದ ಜಗೇಂದ್ರ ಸಿಂಗ್ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಈ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಸಚಿವ ರಾಮಮೂರ್ತಿ ವರ್ಮಾ ಅಕ್ರಮಗಳ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದಿದ್ದಕ್ಕಾಗಿ ಜಗೇಂದ್ರ ಸಿಂಗ್ ಅವರನ್ನು ಸಚಿವರ ಬೆಂಬಲಿಗರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ಪತ್ರಕರ್ತನ ಕುಟುಂಬದವರು ಆರೋಪಿಸಿದ್ದಾರೆ.

ಈ ಸಂಬಂಧ ಈಗಾಗಲೇ ಸಚಿವರ ವಿರುದ್ಧ ಐಪಿಸಿ ಸೆಕ್ಷನ್ 120ಬಿ ಅಡಿ ಎಫ್‌ಐಆರ್ ದಾಖಲಿಸಲಾಗಿದೆ. ಆದರೂ ರಾಮಮೂರ್ತಿ ವರ್ಮಾ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿಲ್ಲ. ಇದರಿಂದ ಪ್ರಕರಣದ ತನಿಖೆ ಚುರುಕುಗೊಳ್ಳುತ್ತಿಲ್ಲ ಎಂಬುದು ಪತ್ರಕರ್ತನ ಕುಟುಂಬದ ಆರೋಪ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT