ಆರ್.ಕೆ.ಸಿಂಗ್ 
ದೇಶ

ಲಲಿತ್ ಮೋದಿಗೆ ಸಹಾಯ: ಕಾನೂನು ರೀತಿ, ನೈತಿಕವಾಗಿ ತಪ್ಪು; ಬಿಜೆಪಿ ಸಂಸದ ಆರ್.ಕೆ.ಸಿಂಗ್

ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಅವರಿಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ...

ನವದೆಹಲಿ: ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಅವರಿಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ಬೆಂಬಲಕ್ಕೆ ನಿಂತಿರುವ ಬಿಜೆಪಿ ನಾಯಕರಿಗೆ ಅವರದೇ ಪಕ್ಷದ ಸಂಸದರೊಬ್ಬರು ತಿರುಗೇಟು ನೀಡಿದ್ದಾರೆ.

'ಲಲಿತ್ ಮೋದಿಗೆ ನೈತಿಕವಾಗಿಯಾಗಲಿ, ಕಾನೂನು ರೀತಿಯಾಗಲಿ, ಯಾವ ರೀತಿಯಿಂದ ಸಹಾಯ ಮಾಡಿದ್ರೂ ಅದು ತಪ್ಪೇ' ಎಂದು ಬಿಜೆಪಿ ಸಂಸದ ಆರ್.ಕೆ.ಸಿಂಗ್ ಅವರು ಹೇಳಿದ್ದಾರೆ. ಅಲ್ಲದೆ ಮೋದಿಯನ್ನು ಭಾರತಕ್ಕೆ ಕರೆತಂದು ವಿಚಾರಣೆಗೆ ಒಳಪಡಿಸಲು ಬೇಕಾದ ಅಗತ್ಯ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಲಿಲಿತ್ ಮೋದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಮೋದಿ ಸರ್ಕಾರ, ಇದೇ ಮೊದಲ ಬಾರಿಗೆ ಆಡಳಿತರೂಢ ಪಕ್ಷದ ಸಂಸದರೊಬ್ಬರಿಂದ ಸಾರ್ವಜನಿಕ ಟೀಕೆಗೆ ಗುರಿಯಾಗಿದೆ.

'ತಲೆಮರೆಸಿಕೊಂಡಿರುವ ವ್ಯಕ್ತಿಗೆ ಯಾರೇ ಸಹಾಯ ಮಾಡಿದರೂ ಅದು ತಪ್ಪು. ಇದು ನೈತಿಕವಾಗಿ ಹಾಗೂ ಕಾನೂನ ಪ್ರಕಾರವಾಗಿದ್ದರೂ ತಪ್ಪು. ಇನ್ನು ತಲೆಮರೆಸಿಕೊಂಡಿರುವ ವ್ಯಕ್ತಿಯನ್ನು ಭೇಟಿ ಮಾಡುವುದು ಸಹ ದೊಡ್ಡ ತಪ್ಪು' ಎಂದು ಮಾಜಿ ಗೃಹ ಕಾರ್ಯದರ್ಶಿ ಸಿಂಗ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಲಲಿತ್ ಮೋದಿ ಅವರು ಕೋರ್ಟ್ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಹೀಗಾಗಿ ಅವರಿಗೆ ಸಹಾಯ ಮಾಡುವುದು ಮತ್ತು ಭೇಟಿ ಮಾಡುವುದು ತಪ್ಪು ಎಂದು ಸಿಂಗ್ ಹೇಳಿದ್ದಾರೆ.

ಇನ್ನು ಇದೇ ವೇಳೆ, ಸುಷ್ಮಾ ಸ್ವರಾಜ್ ಹಾಗೂ ವಸುಂಧರಾ ರಾಜೇ ಅವರನ್ನು ಬಿಜೆಪಿ ಸಮರ್ಥಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಂಗ್, ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT