ಮುಂಬೈ ಪೊಲೀಸ್ ಆಯುಕ್ತ ರಾಕೇಶ್ ಮರಿಯಾ 
ದೇಶ

ಲಲಿತ್ ಮೋದಿ ಭೇಟಿ: ಮಹಾರಾಷ್ಟ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ ರಾಕೇಶ್ ಮರಿಯಾ

ಲಲಿತ್ ಮೋದಿ ಭೇಟಿ ವಿಚಾರ ಕುರಿತಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಮುಂಬೈ ಪೊಲೀಸ್ ಆಯುಕ್ತ ರಾಕೇಶ್ ಮರಿಯಾ ಅವರು ಮಂಗಳವಾರ ವರದಿ ಸಲ್ಲಿಸಿದ್ದಾರೆ...

ನವದೆಹಲಿ: ಲಲಿತ್ ಮೋದಿ ಭೇಟಿ ವಿಚಾರ ಕುರಿತಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಮುಂಬೈ ಪೊಲೀಸ್ ಆಯುಕ್ತ ರಾಕೇಶ್ ಮರಿಯಾ ಅವರು ಮಂಗಳವಾರ ವರದಿ ಸಲ್ಲಿಸಿದ್ದಾರೆ.

2014 ರಲ್ಲಿ ಐಪಿಎಲ್ ಹಗರಣ ಪ್ರಮುಖ ಆರೋಪಿ ಲಲಿತ್ ಮೋದಿ ಅವರನ್ನು ಉನ್ನತಾಧಿಕಾರಿ ರಾಕೇಶ್ ಮರಿಯಾ ಅವರು ಭೇಟಿ ಮಾಡಿದ್ದರು. ಈ ಭೇಟಿಯ ದೃಶ್ಯಾವಳಿಗಳು ಕೆಲವು ಮಾಧ್ಯಮಗಳಲ್ಲಿ ಬಿತ್ತರಗೊಂಡಿದ್ದವು. ಹೀಗಾಗಿ ಪೊಲೀಸ್ ಅಧಿಕಾರಿ ರಾಕೇಶ್ ಮರಿಯಾ ಅವರು ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಅವರನ್ನು ಯಾವ ಕಾರಣಕ್ಕೆ ಭೇಟಿಯಾಗಿದ್ದರು, ಲಲಿತ್ ಮೋದಿ ಅವರಿಗೂ ರಾಕೇಶ್ ಮರಿಯಾ ಯಾವ ಸಂಬಂಧವಿದೆ ಎಂಬ ಕುರಿತಂತೆ ಪ್ರಶ್ನೆಗಳು ಉದ್ಭವಿಸಿದ್ದವಲ್ಲದೆ, ಹಲವು ಚರ್ಚೆಗಳಿಗೆ ಕಾರಣವಾಗಿತ್ತು.

ಹೀಗಾಗಿ ಪ್ರಕರಣ ಕುರಿತಂತೆ ಮಾಧ್ಯಮಗಳಲ್ಲಿ ಸ್ಪಷ್ಟನೆ ನೀಡಿದ್ದ ರಾಕೇಶ್ ಮರಿಯಾ ಅವರು, ನಾನು ಕಳೆದ ಜುಲೈನಲ್ಲಿ ಸಮಾವೇಶವೊಂದರಲ್ಲಿ ಪಾಲ್ಗೊಳ್ಳಲೆಂದು ಲಂಡನ್‍ಗೆ ತೆರಳಿದ್ದೆ. ಅಲ್ಲಿ ಲಲಿತ್‍ರನ್ನು ಭೇಟಿಯಾಗಿದ್ದು ನಿಜ. ಲಲಿತ್ ಮತ್ತು ಅವರ ವಕೀಲರು ನನ್ನನ್ನು ಸಂಪರ್ಕಿಸಿ, ಅವರ ಜೀವಕ್ಕೆ ಭೂಗತಲೋಕದಿಂದ ಬೆದರಿಕೆ ಇರುವ ಬಗ್ಗೆ ತಿಳಿಸಿದರು. ನಾನು ಅವರಿಗೆ ಮುಂಬೈಗೆ ಬಂದು ಅಧಿಕೃತ ದೂರು ದಾಖಲಿಸುವಂತೆ ಸೂಚಿಸಿದ್ದೆ. ನಂತರ ಭಾರತಕ್ಕೆ ವಾಪಸಾದ ಮೇಲೆ ನಾನು ಈ ವಿಚಾರದ ಬಗ್ಗೆ (ಲಲಿತ್ ರನ್ನು ಭೇಟಿಯಾದ) ರಹಸ್ಯ ವರದಿ ಸಿದ್ಧಪಡಿಸಿ ಡಿಜಿಪಿ ಹಾಗೂ ಗೃಹ ಇಲಾಖೆಗೆ ಸಲ್ಲಿಸಿದ್ದೆ'' ಎಂದು ಸ್ಪಷ್ಟನೆ ನೀಡಿದ್ದರು.

ವಿವಾದ ಕುರಿತಂತೆ ರಾಕೇಶ್ ಮರಿಯಾ ಮಾಧ್ಯಮಗಳಲ್ಲಿ ನೀಡಿದ್ದ ಹೇಳಿಕೆ ಕುರಿತಂತೆ ಸ್ಪಷ್ಟನೆ ನೀಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ರಾಕೇಶ್ ಅವರಿಗೆ ಸೂಚನೆ ನೀಡಿದ್ದರು. ಇದರಂತೆ ರಾಕೇಶ್ ಮರಿಯಾ ಅವರು ಲಲಿತ್ ಮೋದಿ ಭೇಟಿಯ ವರದಿಯನ್ನು ಮಹಾರಾಷ್ಟ್ರ ಸರ್ಕಾರಕ್ಕೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT