ಅರವಿಂದ್ ಕೇಜ್ರಿವಾಲ್ 
ದೇಶ

ತೋಮಾರ್ ನಕಲಿ ಪ್ರಮಾಣ ಪತ್ರ; ನನಗೆ ಸತ್ಯ ಗೊತ್ತಿರಲಿಲ್ಲ- ಅರವಿಂದ್ ಕೇಜ್ರಿವಾಲ್

ಮಾಜಿ ಸಚಿವ ಜಿತೇಂದ್ರ ಸಿಂಗ್ ತೋಮಾರ್ ವಿರುದ್ಧದ ನಕಲಿ ಪದವಿ ಪ್ರಮಾಣ ಪತ್ರ ವಿವಾದದಲ್ಲಿ ಇದುವರೆಗೂ...

ನವದೆಹಲಿ:  ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮಾರ್ ವಿರುದ್ಧದ ನಕಲಿ ಪದವಿ ಪ್ರಮಾಣ ಪತ್ರ ವಿವಾದದಲ್ಲಿ ಇದುವರೆಗೂ ಸುಮ್ಮನಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಮೌನ ಮುರಿದಿದ್ದಾರೆ.

ದೆಹಲಿ ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ  ಮಾತನಾಡಿದ ಅವರು, ಪ್ರಕರಣ ಸಂಬಂಧ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಸುದ್ದಿ ಸತ್ಯವಾದದ್ದು, ಇದುವರೆಗೂ ನಾನು ಕತ್ತಲೆಯಲ್ಲಿ ಮುಳುಗಿ ಹೋಗಿದ್ದೆ. ತೋಮಾರ್ ತೋರಿದ್ದ ದಾಖಲೆಗಳು ತಪ್ಪು ಮಾಹಿತಿಯಿಂದ ಕೂಡಿದೆ ಎಂದು ಸದನಕ್ಕೆ ವಿವರ ನೀಡಿದರು.

ನಕಲಿ ಪದವಿ ಪ್ರಮಾಣ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಒಂದು ವೇಳೆ ಜಿತೇಂದ್ರ ಸಿಂಗ್ ತೋಮಾರ್ ಅವರದ್ದು ತಪ್ಪು ಎಂದು ಸಾಬೀತಾದರೇ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಯಾವುದೇ ವಿಚಾರದಲ್ಲಿ ಯಾರೇ ತಪ್ಪು ಮಾಡಿದರೂ ಅದನ್ನು ಪಕ್ಷ ಹಾಗೂ ನಾನು ಸಹಿಸಲ್ಲ. ಯಾವುದೇ ಸಚಿವರೊಂದಿಗೆ ನನಗೆ ವಯಕ್ತಿಕ ಸಂಬಂಧವಿಲ್ಲ. ಹೀಗಾಗಿಯೇ ತೋಮಾರ್ ರಾಜೀನಾಮೆ ಅಂಗೀಕರಿಸಿದ್ದಾಗಿ ಅರವಿಂದ್ ಕೇಜ್ರಿವಾಲ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ