ಜೈಪುರ: ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಪ್ರಕರಣದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಹಾಗೂ ಅವರ ಪುತ್ರ ದುಶ್ಯಂತ್ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ವಸುಂದರಾ ರಾಜೇ ತಮ್ಮ ಲಂಡನ್ ಪ್ರವಾಸ ರದ್ದುಗೊಳಿಸಿದ್ದಾರೆ.
ಸಿಎಂ ವಸುಂಧರಾ ರಾಜೇ ಲಂಡನ್ ನಲ್ಲಿ ನಡೆಯುವ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ರಾಜಸ್ತಾನ ನಿಯೋಗದೊಂದಿಗೆ ಶುಕ್ರವಾರ ತೆರಳಬೇಕಿತ್ತು. ಆದರೆ ನೀತಿ ಆಯೋಗ ಸಂಬಂಧ ಮಹತ್ವದ ವಾದ ಸಭೆ ಇರುವುದರಿಂದ ಪ್ರವಾಸವನ್ನು ರದ್ದುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.
ಲಲಿತ್ ಮೋದಿ ಪ್ರಕರಣದಲ್ಲಿ ತಮ್ಮ ಹೆಸರು ಥಳುಕು ಹಾಕಿಕೊಂಡಿರುವ ಸಂಬಂಧ ಇದುವರೆಗೂ ವಸುಂಧರಾ ರಾಜೇ ಎಲ್ಲಿಯೂ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಪ್ರಕರಣದಲ್ಲಿ ತಮ್ಮ ಕೈವಾಡ ಇದೆ ಎಂಬುದನ್ನು ಒಪ್ಪಿಕೊಂಡಂತಾಗಿದೆ. ಇನ್ನು ಬಿಜೆಪಿ ಕೂಡ ವಸುಂಧರಾ ರಾಜೇ ಅವರಿಂದ ಅಂತರ ಕಾಯ್ದುಕೊಂಡಿದೆ, ಎಲ್ಲಿಯೂ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡದಂತೆ ಸೂಚನೆ ನೀಡಿದೆ, ಇದೆಲ್ಲದರ ನಡುವೆ ಕೇಂದ್ರ ಸಚಿವ ನಿತಿನ್ ಗಡ್ಕರಿ ವಸುಂಧರಾ ರಾಜೇ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.