ಡೋಲಿ ಸಿಂಗ್ 
ದೇಶ

ಉತ್ತರ ಪ್ರದೇಶದಲ್ಲಿ ರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ್ತಿ ಮೇಲೆ ಹಲ್ಲೆ

ಕಾನ್ಪುರ್: ತನ್ನ ಮೇಲೆ ದೌರ್ಜನ್ಯ ನಡೆಸಲು ಬಂದಿದ್ದನ್ನು  ಪ್ರತಿರೋಧಿಸಿದ್ದಕ್ಕೆ ರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಮೇಲೆ ಹಲ್ಲೆ ನಡೆಸಿ ಥಳಿಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಡೋಲಿ ಸಿಂಗ್ ಹಲ್ಲೆಗೊಳಗಾದ ಕಬಡ್ಡಿ ಆಟಗಾರ್ತಿ. ಸುಮಾರು 10 ರಿಂದ 12 ಮಂದಿಯಿದ್ದ ಗುಂಪೊಂದು ಕೈಯ್ಯಲ್ಲಿ ಬಂದೂಕು ಮತ್ತು ದೊಣ್ಣೆ ಹಿಡಿದು ಮನೆಗೆ ನುಗ್ಗಿ  ಡೋಲಿ ಸಿಂಗ್ ಮೇಲೆ ಹಲ್ಲೆ ನಡೆಸಿದೆ. ಹೀಗಾಗಿ ಡೋಲಿ ಸಿಂಗ್ ಮುಖದ ಮೇಲೆ ಹಲವು ಗಾಯಗಳಾಗಿವೆ.

ಇನ್ನು ಈ ಸಂಬಂಧ ದೂರು ನೀಡಲು ಹೋದರೆ ಪೊಲೀಸರು ಸರಿಯಾಗಿ ಸ್ಪಂದಿಸಿಲ್ಲ, ಆದಷ್ಟು ಶೀಘ್ರವೇ ನಾವು ದೂರು ದಾಖಲಿಸಿಕೊಳ್ಳುತ್ತೇವೆ. ನೀವೀಗ ಹೊರಡಿ ಎಂದು ಪೊಲೀಸರು ಹೇಳಿದರು ಎಂದು ಡೋಲಿ ಸಿಂಗ್ ತಂದೆ ಆರೋಪಿಸಿದ್ದಾರೆ.
ಬಳಿಕ ನಾವು ಪೊಲೀಸ್ ಮಹಾ ನಿರ್ದೇಶಕರ ಬಳಿ ಹೋಗಿ ಘಟನೆಯನ್ನು ವಿವರಿಸಿದೆವು. ಅವರು ಸಮಾಧಾನ ಮಾಡಿ ವಾಪಸ್ ಕಳಿಸಿದರೇ ಹೊರತು ದೂರುಸ ದಾಖಲಿಸಿಕೊಳ್ಳಲಿಲ್ಲ ಎಂದು ಡೋಲಿ ಸಿಂಗ್ ತಂದೆ ದೂರಿದ್ದಾರೆ.

ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಾಗಿದ್ದು, ಪೊಲೀಸರು ಶೀಘ್ರವೇ ಆರೋಪಿಗಳನ್ನು ಬಂಧಿಸಲಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖಂಡ ಗೌರವ್ ಭಾಟಿಯಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಜೊತೆ ಒಪ್ಪಂದಕ್ಕೆ ಇರಾನ್‌ ಕಾತರ, ಶೀಘ್ರದಲ್ಲೇ ಯುದ್ಧ ಅಂತ್ಯ: ತೈಲ ಬೆಲೆ ಭಾರೀ ಕುಸಿತ; ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಆನೇಕಲ್‌ನಲ್ಲಿ ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ರೈತರು, KRS ತೀವ್ರ ವಿರೋಧ!

ನಿಜಕ್ಕೂ ನಮ್ಮದು F…Good Team: ಲೈವ್​ನಲ್ಲೇ 'ಅಶ್ಲೀಲ ಪದ' ಬಳಸಿದ ರಿಷಭ್ ಪಂತ್, ವ್ಯಾಪಕ ಟೀಕೆ, Video!

ಇಟಲಿಯಲ್ಲಿ ಪ್ರಧಾನಿ ಮೋದಿ: “ವೆಲ್‌ಕಮ್ ಟು ರೋಮ್ ಮೈ ಫ್ರೆಂಡ್” ಎಂದು ಆತ್ಮೀಯ ಸ್ವಾಗತ ಕೋರಿದ ಜಾರ್ಜಿಯಾ ಮೆಲೋನಿ..!

Operation Epic Fury: ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕಾಗೆ ಮಹಾಘಾತಕ: F-35 ಸೇರಿ 42 ಯುದ್ಧ ವಿಮಾನ, ಡ್ರೋನ್‌ಗಳಿಗೆ ಹಾನಿ..!

SCROLL FOR NEXT