ವಸುಂಧರಾ ರಾಜೇ 
ದೇಶ

ಬಿಜೆಪಿ ವರಿಷ್ಠರ ಮುಂದೆ ತಪ್ಪೊಪ್ಪಿಕೊಂಡ ವಸುಂಧರಾ ರಾಜೇ

ಐಪಿಎಲ್ ಹಗರಣ ಆರೋಪಿ ಲಲಿತ್ ಮೋದಿಗೆ ಸಹಾಯ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ...

ನವದೆಹಲಿ: ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಗೆ ಸಹಾಯ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಬಿಜೆಪಿ ವರಿಷ್ಠರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, 2011ರಲ್ಲಿ ಲಲಿತ್ ಮೋದಿ ಅವರು ಲಂಡನ್ ಕೋರ್ಟ್‌ಗೆ ಸಲ್ಲಿಸಿದ ವಲಸೆ ಪತ್ರಗಳಿಗೆ ತಾವು ಸಹಿ ಹಾಕಿರುವುದಾಗಿ ರಾಜೇ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ನಿನ್ನೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಅವರು ರಾಜೇ ಮತ್ತು ಲಲಿತ್ ಮೋದಿ ನಡುವಿನ ಸಂಬಂಧದ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.

ಲಲಿತ್ ಮೋದಿ ಬ್ರಿಟನ್‍ನಲ್ಲಿ ಉಳಿಯುವ ಸಲುವಾಗಿ ರಾಜೇ ಸಹಾಯ ಮಾಡಿರುವ ದಾಖಲೆಗಳೆಲ್ಲವನ್ನೂ ಜೈರಾಂ ರಮೇಶ್ ಮಾಧ್ಯಮಗಳಿಗೆ ನೀಡಿದ್ದಾರೆ. ಅಲ್ಲದೆ ಈ ಕೂಡಲೇ ವಸುಂಧರಾ ರಾಜೇ ರಾಜಿನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದರು.

ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬಿಜೆಪಿ ಈ ಬಗ್ಗೆ 24 ಗಂಟೆಗಳಲ್ಲಿ ವಿವರಣೆ ನೀಡುವಂತೆ ರಾಜೇ ಅವರಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ವಿವರಣೆ ನೀಡಿರುವ ರಾಜಸ್ಥಾನ ಸಿಎಂ ತಾನು ಅಫಿಡವಿಟ್‌ಗೆ ಸಹಿ ಹಾಕಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!