ಕುವೈತ್ : ಮಸೀದಿಯಲ್ಲಿ ಆತ್ಮಾಹುತಿ ದಾಳಿ ; 13 ಸಾವು
ಶುಕ್ರವಾರ ಕುವೈತ್ ಸಿಟಿಯಲ್ಲಿರುವ ಮಸೀದಿಯೊಂದರಲ್ಲಿ ಆತ್ಮಾಹುತಿ ದಾಳಿ ನಡೆದಿದ್ದು, 13 ಮಂದಿ ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ....
ಕುವೈತ್ ಸಿಟಿ: ಶುಕ್ರವಾರ ಕುವೈತ್ ಸಿಟಿಯಲ್ಲಿರುವ ಮಸೀದಿಯೊಂದರಲ್ಲಿ ಆತ್ಮಾಹುತಿ ದಾಳಿ ನಡೆದಿದ್ದು, 13 ಮಂದಿ ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ. ಈ ದಾಳಿಯಲ್ಲಿ 30 ಜನರಿಗೆ ಗಾಯಗಳಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.
ಇಲ್ಲಿನ ಇಮಾಮ್ ಸಾದಿಕ್ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ವೇಳೆ ಈ ದಾಳಿ ಸಂಭವಿಸಿದೆ. ಪವಿತ್ರ ರಂಜಾನ್ ಮಾಸಾಚರಣೆಯ ಪ್ರಯುಕ್ತ ಮಸೀದಿಯಲ್ಲಿ ಜನರ ಸಂಖ್ಯೆಯೂ ಜಾಸ್ತಿ ಇತ್ತು.
ಪ್ರಸ್ತುತ ದಾಳಿಯ ಹೊಣೆಯನ್ನು ಇಸಿಸ್ ಒಪ್ಪಿಕೊಂಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.