ಮಸೀದಿಯಲ್ಲಿ ಆತ್ಮಾಹುತಿ ದಾಳಿ: ಸಾವಿನ ಸಂಖ್ಯೆ 25 ಏರಿಕೆ
ಸಿಟಿಯ ಶಿಯಾ ಮಸೀದಿ ಅಲ್ -ಇಮಾಮ್ ಅಲ್ -ಸಾದೇಕ್ನಲ್ಲಿ ಶುಕ್ರವಾರದ ನಮಾಜ್ ವೇಳೆ ಉಗ್ರರು ಬಾಂಬ್ ಸ್ಫೋಟಿಸಿದ್ದಾರೆ...
ಕುವೈತ್: ಸಿಟಿಯ ಶಿಯಾ ಮಸೀದಿ ಅಲ್ -ಇಮಾಮ್ ಅಲ್ -ಸಾದೇಕ್ನಲ್ಲಿ ಶುಕ್ರವಾರದ ನಮಾಜ್ ವೇಳೆ ಉಗ್ರರು ಬಾಂಬ್ ಸ್ಫೋಟಿಸಿದ್ದಾರೆ.
ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಮಸೀದಿಯೊಳಕ್ಕೆ ಬಂದ ಆತ್ಮಾಹುತಿ ಬಾಂಬರೊಬ್ಬ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಐಸಿಸ್ ಉಗ್ರರು ಸಾಮಾಜಿಕ ತಾಣದಲ್ಲಿ ದಾಳಿಯ ಹೊಣೆ ಹೊತ್ತುಕೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.