ವರಿಷ್ಠರ ಭೇಟಿಗೆ ಸಿಗದ ಅವಕಾಶ: ಜೈಪುರಕ್ಕೆ ವಾಪಸಾದ ಸಿಎಂ ವಸುಂದರಾ ರಾಜೇ
ಲಲಿತ್ ಮೋದಿ ಪ್ರಕರಣ ಸಂಬಂಧ ಬಿಜೆಪಿ ವರಿಷ್ಠರನ್ನು ಭೇಟಿಯಾಗಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ರಾಜಸ್ತಾನ ಮುಖ್ಯಮಂತ್ರಿ ವಸುಂದರಾ ...
ನವದೆಹಲಿ/ಜೈಪುರ: ಲಲಿತ್ ಮೋದಿ ಪ್ರಕರಣ ಸಂಬಂಧ ಬಿಜೆಪಿ ವರಿಷ್ಠರನ್ನು ಭೇಟಿಯಾಗಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ರಾಜಸ್ತಾನ ಮುಖ್ಯಮಂತ್ರಿ ವಸುಂದರಾ ರಾಜೇ ಜೈಪುರಕ್ಕೆ ವಾಪಸಾಗಿದ್ದಾರೆ.
ನೀತಿ ಆಯೋಗ ಸಭೆಯಲ್ಲಿ ಭಾಗವಹಿಸಲು ಬಂದಿದ್ದ ವಸುಂದರಾ ರಾಜೇ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಅರುಣ್ ಜೈಟ್ಲಿ ಅವರನ್ನು ಭೇಟಿ ಮಾಡಲು ಉದ್ದೇಶಿಸಿದ್ದರು. ಆದರೆ ಈ ಮೂವರು ವಸುಂದರಾ ಅವರನ್ನು ಭೇಟಿ ಮಾಡಲು ನಿರಾಕರಿಸಿದ ಕಾರಣ ವಸುಂದರಾ ರಾಜೇ ಜೈಪುರಕ್ಕೆ ವಾಪಾಸಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಸುಂದರಾ ರಾಜೇ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವಂತೆ ಎಲ್ಲೆಡೆಯಿಂದ ಒತ್ತಡ ಹೆಚ್ಚಾಗುತ್ತಿದೆ. ಆದರೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಹಲವು ಹಿರಿಯ ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿ ಬಳಿ ವಸುಂದರಾ ಅವರನ್ನು ಸಮರ್ಥಿಸಿಕೊಂಡು ಕ್ಲೀನ್ ಚಿಟ್ ನೀಡಿದ್ದಾರೆ ಎನ್ನಲಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.