ಘರ್ಷಣೆಯಲ್ಲಿ ಗಾಯಗೊಂಡ ಸಿಬ್ಬಂದಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಚಿತ್ರ 
ದೇಶ

ಆಂಬೂರಿನಲ್ಲಿ ಘರ್ಷಣೆ: 42 ಪೊಲೀಸರಿಗೆ ಗಾಯ

ಶಮೀಲ್ ಹತ್ಯೆ ವಿರೋಧಿಸಿ ಚೆನ್ನೈನ ಅಂಬೂರಿನಲ್ಲಿ ಮುಸ್ಲಿಂ ಸಮುದಾಯ ಹಾಗೂ ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘಟನೆಯಲ್ಲಿ 42ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ....

ಚೆನ್ನೈ: ಶಮೀಲ್ ಹತ್ಯೆ ವಿರೋಧಿಸಿ ಚೆನ್ನೈನ ಅಂಬೂರಿನಲ್ಲಿ ಮುಸ್ಲಿಂ ಸಮುದಾಯ ಹಾಗೂ ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘಟನೆಯಲ್ಲಿ 42ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.

ಪಳನಿ ಎಂಬ ವ್ಯಕ್ತಿ ತನ್ನ ಹೆಂಡತಿ ಕಾಣೆಯಾಗಿದ್ದಾಳೆಂದು ಹೇಳಿ ಶಮೀಲ್ ಅಹ್ಮದ್ (26) ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರು ಶಮೀಲ್ ಅಹ್ಮದ್ ಎಂಬ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದ್ದಾರೆ. ಅಲ್ಲದೆ, ಶಮೀಲ್ ಅಹ್ಮದ್ ಅವರಿಗೆ ಗಂಭೀರವಾಗಿ ಹೊಡೆದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಶಮೀಲ್ ಅಹ್ಮದ್ ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

ಈ ಘಟನೆ ಇದೀಗ ಅಂಬೂರಿನಲ್ಲಿ ಘರ್ಷಣೆಗೆ ಕಾರಣವಾಗಿದ್ದು, ಮುಸ್ಲಿಂ ಸಮುದಾಯದವರು ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆಗಳಿದಿದ್ದಾರೆ. ಪ್ರತಿಭಟನೆ ತೀರ್ವಗೊಂಡು ನಂತರ ಕಲ್ಲುತೂರಾಟ ನಡೆದಿದೆ. ಈ ವೇಳೆ ಮಧ್ಯಪ್ರವೇಶ ಮಾಡಿದ ಪೊಲೀಸರ ಮೇಲೂ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಇದರ ಪರಿಣಾಮ ಸ್ಥಳದಲ್ಲಿ 42 ಮಂದಿ ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರತಿಭಟನೆ ವೇಳೆ ಆಂಬೂರು ಡಿಎಸ್ ಪಿ ಗಣೇಶನ್ ಅವರ ಕಾರು, ಸಿಬ್ಬಂದಿಯ ಎರಡು ವಾಹನ ಹಾಗೂ ಬಸ್ ಗಳಿಗೆ ಬೆಂಕಿ ಹಚ್ಚಿದ್ದು, 147ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಂಗಾಳದಲ್ಲಿ ಬದಲಾವಣೆಯ ಪರ್ವ: ಗಡಿ ಸುರಕ್ಷತೆಗೆ ಆದ್ಯತೆ: BSFಗೆ ಭೂಮಿ ಹಸ್ತಾಂತರಿಸಲು ಸುವೇಂದು ಸರ್ಕಾರ ಅಸ್ತು, ಮೊದಲ ಸಂಪುಟ ಸಭೆಯಲ್ಲೇ ಮಹತ್ವದ ನಿರ್ಧಾರ..!

'ಇನ್ನೊಂದ್ ವರ್ಷ ಖರೀದಿ ಮಾಡ್ಬೇಡಿ..'.: ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಪಾತಾಳಕ್ಕೆ ಕುಸಿದ ಚಿನ್ನಾಭರಣ ಷೇರು

ಎರಡು ವರ್ಷದವೆರೆಗಿನ 'ಸಮ್ಮತಿಯ ಲೈಂಗಿಕ ಸಂಬಂಧ' ಅತ್ಯಾಚಾರವೇ? ಕೋರ್ಟ್ ಹೇಳಿದ್ದೇನು!

IPL 2026: ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸುತ್ತಲೇ ಅಸಭ್ಯ ವರ್ತನೆ ತೋರಿದ ಸ್ಟಾರ್ ಬ್ಯಾಟರ್ Tim David, ಬಿಸಿಸಿಐ ಕೆಂಗಣ್ಣು!

West Asia war ಎಫೆಕ್ಟ್: ಭಾರತೀಯ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

SCROLL FOR NEXT