ಮಧ್ಯಪ್ರದೇಶದಲ್ಲಿ ಶಿಕ್ಷಕರ ನೇಮಕಾತಿ ಹಗರಣ: ಆರೋಪಿ ತೋಮರ್ ಸಾವು
ಮಧ್ಯಪ್ರದೇಶದಲ್ಲಿ ಶಿಕ್ಷಕರ ನೇಮಕಾತಿ ಹಗರಣದ ಪ್ರಮುಖ ಆರೋಪಿ ನರೇಂದ್ರ ಸಿಂಗ್ ತೋಮರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ...
ಇಂದೋರ್(ಮಧ್ಯಪ್ರದೇಶ): ಮಧ್ಯಪ್ರದೇಶದಲ್ಲಿ ಶಿಕ್ಷಕರ ನೇಮಕಾತಿ ಹಗರಣದ ಪ್ರಮುಖ ಆರೋಪಿ ನರೇಂದ್ರ ಸಿಂಗ್ ತೋಮರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಫೆಬ್ರವರಿಯಿಂದ ಇಂದೋರ್ ಜೈಲಿನಲ್ಲಿದ್ದ ನರೇಂದ್ರ ಸಿಂಗ್ ತೋಮರ್ ಎದೆನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ರವಾನೆ ಮಾಡುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆಂದು ಇಂದೋರ್ ಆಸ್ಪತ್ರೆ ವೈದ್ಯರು ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಸುಮಾರು 24 ಮಂದಿ ಮೃತಪಟ್ಟಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.