ಗಾಂಧಿ 
ದೇಶ

ಗಾಂಧಿ ಹತ್ಯೆ ಪ್ರಕರಣದ ಅಂತಿಮ ಆರೋಪ ಪಟ್ಟಿ ನಾಪತ್ತೆ?

ಮಹಾತ್ಮ ಗಾಂಧಿ ಹತ್ಯೆ ಪ್ರಕರಣದಲ್ಲಿ ದಾಖಲಿಸಿದ ಅಂತಿಮ ಆರೋಪ ಪಟ್ಟಿ ನಾಪತ್ತೆಯಾಗಿದೆ. ಒಡಿಶಾದ ಸಾಮಾಜಿಕ ಕಾರ್ಯಕರ್ತರೊಬ್ಬರು...

ನವದೆಹಲಿ: ಮಹಾತ್ಮ ಗಾಂಧಿ ಹತ್ಯೆ ಪ್ರಕರಣದಲ್ಲಿ ದಾಖಲಿಸಿದ ಅಂತಿಮ ಆರೋಪ ಪಟ್ಟಿ ನಾಪತ್ತೆಯಾಗಿದೆ. ಒಡಿಶಾದ ಸಾಮಾಜಿಕ ಕಾರ್ಯಕರ್ತರೊಬ್ಬರು ಗಾಂಧೀಯವರ ಹತ್ಯೆಯ ವಿವರಗಳನ್ನು ನೀಡುವಂತೆ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಪಡೆಯಲು ಯತ್ನಿಸಿದಾಗ ಈ ವಿಷಯ ಬಹಿರಂಗಗೊಂಡಿದೆ. ಗಾಂಧೀಜಿಯವರ ಕುಟುಂಬದವರ ಒತ್ತಾಯಕ್ಕೆ ಮಣಿದು ಮಹಾತ್ಮಾ ಗಾಂಧಿಯವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿಲ್ಲ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾದ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಅದೇ ವೇಳೆ ಗಾಂಧೀಜಿ ಹತ್ಯೆಯ ಎಫ್‌ಐಆರ್ ಮತ್ತು ಆರೋಪಪಟ್ಟಿ ಬಹಿರಂಗಪಡಿಸುವಂತೆ ಸೆಂಟ್ರಲ್ ಇನ್‌ಫಾರ್ಮೇಷನ್ ಕಮಿಷನ್, ಗೃಹ ಸಚಿವಾಲಯಕ್ಕೆ ಆದೇಶಿಸಿತ್ತು. ಸಚಿವಾಲಯ ನ್ಯಾಷನಲ್ ಆರ್ಕೈವ್ಸ್ ಆಫ್ ಇಂಡಿಯಾ, ಗಾಂಧಿ ಸ್ಮೃತಿ ನಿರ್ದೇಶಕ ಮೊದಲಾದವರಿಗೆ ಈ ಆದೇಶವನ್ನು ವರ್ಗಾಯಿಸಿತ್ತು.

ಗಾಂಧಿ ಕುಟುಂಬದವರ ಮನವಿ ಮೇರೆಗೆ ಗಾಂಧಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿಲ್ಲ ಎಂದು ಗಾಂಧಿ ಸ್ಮೃತಿ ಅಧಿಕಾರಿಗಳು ನ್ಯಾಷನಲ್ ಅರ್ಕೈವ್ಸ್ ಗೆ ಹೇಳಿದ್ದಾರೆ.

ಗಾಂಧಿ ಹತ್ಯೆಗೆ ಸಂಬಂಧಿಸಿದಂತೆ ಎಫ್‌ಐಆರ್, ಚಾರ್ಜ್‌ಶೀಟ್ ಇದ್ಯಾವುದರ ಬಗ್ಗೆ ನಮಗೆ ಮಾಹಿತಿ ಇಲ್ಲವೆಂದು ಗಾಂಧಿ ಸ್ಮೃತಿ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.
ತುಘ್ಲಕ್ ಪೊಲೀಸ್ ಸ್ಟೇಷನ್‌ನಲ್ಲಿ ಕೇಸು ದಾಖಲಾಗಿತ್ತು ಎಂದು ಇನ್‌ಫಾರ್ಮೇಶನ್ ಕಮಿಷನರ್ ಶರತ್ ಸಬರ್‌ವಾಲ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!