ಸಾಂದರ್ಭಿಕ ಚಿತ್ರ 
ದೇಶ

ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ ನಡೆಸಿ ಗುಪ್ತಾಂಗದಲ್ಲಿ ಕೋಲು ತುರುಕಿದರು

ಹದಿನಾಲ್ಕು ವರ್ಷ ವಯಸ್ಸಿನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಗುಪ್ತಾಂಗಕ್ಕೆ ಕೋಲು ತುರುಕಿರುವ ಹೃದಯ ವಿದ್ರಾವಕ ಘಟನೆ...

ನವದೆಹಲಿ: ಹದಿನಾಲ್ಕು ವರ್ಷ ವಯಸ್ಸಿನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಗುಪ್ತಾಂಗಕ್ಕೆ ಕೋಲು ತುರುಕಿರುವ ಹೃದಯ ವಿದ್ರಾವಕ ಘಟನೆ ಉತ್ತರಪ್ರದೇಶ ಬದೌನ್‌ನಲ್ಲಿ ನಡೆದಿದೆ.

ಬಾಲಕಿಯ ನೆರಮನೆಯವರೇ ಈ ಕೃತ್ಯವೆಸಗಿದ್ದಾರೆ. ಘಟನೆ ಸಂಬಂಧ ಇಬ್ಬರು ಬಾಲಾಪರಾಧಿಗಳನ್ನು ಬಂಧಿಸಿದ್ದು, ಮತ್ತೋರ್ವ ತಲೆಮರೆಸಿಕೊಂಡಿದ್ದಾನೆ. ವೈದ್ಯಕೀಯ ವರದಿಯ ಪ್ರಕಾರ, ಬಾಲಕಿಯ ಗುಪ್ತಾಂಗಕ್ಕೆ ಬೆಂಕಿಪೊಟ್ಟಣ, ಬಟ್ಟೆ, ಪ್ಲಾಸ್ಟಿಕ್ ಮತ್ತು ಮರದ ತುಂಡುಗಳನ್ನು ತುರುಕಲಾಗಿದೆ ಎಂದು ವರದಿಗಳು ತಿಳಿಸಿವೆ.

ಕಳೆದ ಮಂಗಳವಾರ ಬಿಸ್ಕೇಟ್ ತರಲು ಅಂಗಡಿಗೆ ತೆರಳಿದ್ದಾಗ ಪಕ್ಕದ ಮನೆಯಾತ ಯಾರೋ ಕಾಯುತ್ತಿರುವುದಾಗಿ ಹೇಳಿದ ಆತನೊಂದಿಗೆ ತೆರಳುತ್ತಿದ್ದಾಗ ಮತ್ತಿಬ್ಬರು ಜೊತೆಗೂಡಿ, ಕಟ್ಟಿಹಾಕಿ ಬೈಕ್‌ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಮದ್ಯ ಸೇವಿಸುವಂತೆ ಒತ್ತಾಯಿಸಿದರು. ನಿರಾಕರಿಸಿದಾಗ ಒಬ್ಬಾತ ಮನಬಂದಂತೆ ಥಳಿಸಿದ, ನಂತರ ಸಾಮೂಹಿಕ ಅತ್ಯಾಚಾರವೆಸಗಿ, ಮನೆ ಬಳಿ ಬಿಟ್ಟು ಪೊಲೀಸರಿಗೆ ವಿಷಯ ತಿಳಿಸಿದರೆ ಕೊಲ್ಲುವುದಾಗಿ ಬೆದರಿಸಿದರು ಎಂದು ಬಾಲಕಿ ದೂರು ನೀಡಿದ್ದಾಳೆ.

ಘಟನೆ ನಡೆದ 3 ದಿನಗಳ ತರುವಾಯ ಬಾಲಕಿ ಪ್ರಜ್ಞೆ ತಪ್ಪಿದ್ದಾಳೆ. ವೈದ್ಯಕೀಯ ಚಿಕಿತ್ಸೆಗೆ ಕರೆದೊಯ್ದಾಗ ಘಟನೆ ಬೆಳಕಿಗೆ ಬಂದಿದೆ. ಹಿರಿಯ ಪೊಲೀಸ್ ಅಧಿಕಾರಿ ಆರ್‌ಕೆಎಸ್ ರಾಥೋರ್ ಪ್ರಕರಣ ದಾಖಲಿಸಿಕೊಂಡು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT