ವ್ಯಾಟ್ ತೆರಿಗೆ ಹೆಚ್ಚಳ: ಎಎಪಿ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ವ್ಯಾಟ್ ತೆರಿಗೆಯನ್ನು ಶೇ.20 ರಿಂದ ಶೇ.30ಕ್ಕೆ ಏರಿಕೆ ಮಾಡಿರುವುದನ್ನು ವಿರೋಧಿಸಿರುವ ಯುವ ಕಾಂಗ್ರೆಸ್ ಕಾರ್ಯಕರ್ತರು ಎಎಪಿ ವಿರುದ್ಧ ದೆಹಲಿಯಾದ್ಯಂತ ಬುಧವಾರ ಪ್ರತಿಭಟನೆ ನಡೆಸುತ್ತಿದೆ...
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ವ್ಯಾಟ್ ತೆರಿಗೆಯನ್ನು ಶೇ.20 ರಿಂದ ಶೇ.30ಕ್ಕೆ ಏರಿಕೆ ಮಾಡಿರುವುದನ್ನು ವಿರೋಧಿಸಿರುವ ಯುವ ಕಾಂಗ್ರೆಸ್ ಕಾರ್ಯಕರ್ತರು ಎಎಪಿ ವಿರುದ್ಧ ದೆಹಲಿಯಾದ್ಯಂತ ಬುಧವಾರ ಪ್ರತಿಭಟನೆ ನಡೆಸುತ್ತಿದೆ.
ಬಜೆಟ್ ಮಂಡನೆ ಸಂದರ್ಭದಲ್ಲ ಅಗತ್ಯ ವಸ್ತುಗಳ ಮೇಲಿರುವ ತೆರಿಗೆ ಇಳಿಸುವುದಾಗಿ ಆಮ್ ಆದ್ಮಿ ಸರ್ಕಾರ ಜನರಿಗೆ ಭರವಸೆ ನೀಡಿತ್ತು. ಆದರೆ, ನಿನ್ನೆ ತನ್ನ ಭರವಸೆಯನ್ನು ತಲೆಕೆಳಗಾಗಿ ಮಾಡಿದ್ದ ಆಪ್ ವ್ಯಾಟ್ ತೆರಿಗೆಯನ್ನು ಶೇ.20 ರಿಂದ 30ಕ್ಕೆ ಏರಿಕೆ ಮಾಡಿತ್ತು. ಇದರ ಪರಿಣಾಮವಾಗಿ ಪೆಟ್ರೋಲ್ ದರ, ಅಡುಗೆ ಅನಿಲ, ಸಿಎನ್ಜಿ ಮತ್ತು ಮದ್ಯದ ದರಗಳು ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.
ಹೀಗಾಗಿ ಭರವಸೆಗಳನ್ನು ಈಡೇರಿಸದ ಆಪ್ ವಿರುದ್ಧ ಹರಿಹಾಯ್ದಿರುವ ಯುವ ಕಾಂಗ್ರೆಸ್ ನ ಕಾರ್ಯಕರ್ತರು ಅರವಿಂದ್ ಕೇಜ್ರವಾಲ್ ಅವರ ದೆಹಲಿ ನಿವಾಸದೆದುರು ಪ್ರತಿಭಟನೆ ನಡೆಸುತ್ತಿದ್ದು, ಅರವಿಂದ್ ಕೇಜ್ರಿವಾಲ್ ಹಾಗೂ ಆಪ್ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.