ಪತಿಯ ಮರ್ಮಾಂಗಕ್ಕೆ ಕತ್ತರಿ (ಸಾಂದರ್ಭಿಕ ಚಿತ್ರ) 
ದೇಶ

ಶೀಲ ಶಂಕಿಸಿದ ಪತಿಯ ಮರ್ಮಾಂಗ ಕತ್ತರಿಸಿದ ಪತ್ನಿ

ಶೀಲ ಶಂಕಿಸಿ ನಿತ್ಯ ಕಿರುಕುಳ ನೀಡುತ್ತಿದ್ದ ಪತಿಯ ಮರ್ಮಾಂಗವನ್ನು ಪತ್ನಿಯೇ ಕತ್ತರಿಸಿ ಹಾಕಿದ ಘಟನೆ ಹೈದರಾಬಾದಿನಲ್ಲಿ ನಡೆದಿದೆ..

ಹೈದರಾಬಾದ್: ಶೀಲ ಶಂಕಿಸಿ ನಿತ್ಯ ಕಿರುಕುಳ ನೀಡುತ್ತಿದ್ದ ಪತಿಯ ಮರ್ಮಾಂಗವನ್ನು ಪತ್ನಿಯೇ ಕತ್ತರಿಸಿ ಹಾಕಿದ ಘಟನೆ ಹೈದರಾಬಾದಿನಲ್ಲಿ ನಡೆದಿದೆ.

ಹೈದರಾಬಾದ್ ಮೂಲದ ಸತೀಶ್ ಎಂಬಾತ ತನ್ನ ಪತ್ನಿಯ ಶೀಲ ಶಂಕಿಸಿ ನಿತ್ಯ ಕಿರುಕುಳ ನೀಡುತ್ತಿದ್ದನು. ಪತಿಯ ಕಿರುಕುಳದಿಂದ ಬೇಸತ್ತಿದ್ದ ಪತ್ನಿ ನಿನ್ನೆ ಅಂದರೆ ಸೋಮವಾರ ಸತೀಶ್ ಕಂಠಪೂರ್ತಿ ಕುಡಿದು ಮನೆಗೆ ಬಂದು ಮಲಗಿದ್ದಾಗ ಆತನ ಮರ್ಮಾಂಗವನ್ನು ಕತ್ತರಿಸಿ ಹಾಕಿದ್ದಾಳೆ. ಬಳಿಕ ಕೂಡಲೇ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ಮನೆಗೆ ಬೀಗ ಹಾಕಿ ಹೊರಟು ಹೋಗಿದ್ದಾಳೆ. ನೋವಿನಿಂದ ನರಳುತ್ತಿದ್ದ ಸತೀಶ್ ನರಳಾಟವನ್ನು ಕೇಳಿದ ಅಕ್ಕಪಕ್ಕದ ಮನೆಯವರು ಕೂಡಲೇ ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಸತೀಶನ ಮನೆಯ ಬೀಗವನ್ನು ಹೊಡೆದು ಹಾಕಿ ಕೂಡಲೇ ಆತನನ್ನು ಉಸ್ಮಾನಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.  ಪ್ರಸ್ತುತ ಸತೀಶ್ ನ ಸ್ಥಿತಿ ಚಿಂತಾಜನಕವಾಗಿದ್ದು, ಆತ ಪ್ರಾಣಾಪಾಯದಲ್ಲಿದ್ದಾನೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ನಿತ್ಯ ಕುಡಿದು ಬಂದು ಪತ್ನಿಯನ್ನು ಹಿಂಸಿಸುತ್ತಿದ್ದ ಸತೀಶ್
ಪೊಲೀಸ್ ಮೂಲಗಳ ಪ್ರಕಾರ ಸತೀಶ್ ಹೈದರಾಬಾದಿನ ಆಸಿಫ್ ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಮೆಹದಿ ಪಟ್ಟಣಂ ನ ಅಂಬೇಡ್ಕರ್ ನಗರದ ನಿವಾಸಿಯಾಗಿದ್ದು, ಈತ ಕೂಲಿ ಕೆಲಸ ಮಾಡಿಕೊಂಡಿದ್ದನು. ಆತನ ಪತ್ನಿ (ಹೆಸರು ಬಹಿರಂಗಗೊಂಡಿಲ್ಲ) ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿದ್ದರು. ಕುಡಿತದ ಚಟಕ್ಕೆ ದಾಸನಾಗಿದ್ದ ಸತೀಶ್ ತನ್ನ ಪತ್ನಿಯ ಶೀಲವನ್ನೇ ಶಂಕಿಸಿ ನಿತ್ಯ ಕುಡಿದು ಬಂದು ಆಕೆಗೆ ದೈಹಿಕ ಹಿಂಸೆ ನೀಡುತ್ತಿದ್ದ.

ಪತಿಯ ನಿತ್ಯ ಕಿರುಕುಳ ತಾಳಲಾರದೆ ಸೋಮವಾರ ಪತ್ನಿ ಆತನನ್ನು ಕೊಲ್ಲಲು ಯತ್ನಿಸಿದ್ದಾಳೆ. ಬಳಿಕ ಮನೆಗೆ ಬೀಗ ಹಾಕಿ ತನ್ನ ಮಕ್ಕಳೊಂದಿಗೆ ಪರಾರಿಯಾಗಿದ್ದಾಳೆ. ಸತೀಶನ  ಸಹೋದರ ನೀಡಿದ ದೂರಿನ ಮೇಲೆ ಪತ್ನಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಸೀಫ್‌ನಗರ ಪೊಲೀಸ್ ಠಾಣಾಧಿಕಾರಿ (ಪಿಎಸ್‌ಐ) ಕೆ.ಶ್ರೀಕಾಂತ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್