ಪ್ರಧಾನಿ ನರೇಂದ್ರ ಮೋದಿ ಮತ್ತು ಮಾರ್ಕ್ ಜುಕರ್ ಬರ್ಗ್ (ಸಂಗ್ರಹ ಚಿತ್ರ) 
ದೇಶ

ಫೇಸ್ ಬುಕ್ ಸಂಸ್ಥಾಪಕನಿಂದ ಪ್ರಧಾನಿ ಮೋದಿ ಪ್ರಶಂಸೆ

ಖ್ಯಾತ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ನ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಾರ್ಕ್‌ ಜುಕರ್‌ಬರ್ಗ್‌ ಅವರು ಭಾರತದ ಪ್ರಧಾನಿ ನರೇಂದ್ರ...

ಬಾರ್ಸಿಲೋನಾ: ಖ್ಯಾತ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ನ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಾರ್ಕ್‌ ಜುಕರ್‌ಬರ್ಗ್‌ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಕ್ತ ಕಂಠದಿಂದ ಪ್ರಶಂಶಿಸಿದ್ದಾರೆ.

ಸ್ಪೈನ್ ರಾಜಧಾನಿ ಬಾರ್ಸಿಲೋನಾದಲ್ಲಿ ನಡೆದ ವಿಶ್ವ ಮೊಬೈಲ್‌ ಕಾಂಗ್ರೆಸ್‌ನಲ್ಲಿ ಮಾತನಾಡಿದ ಜುಕರ್ ಬರ್ಗ್ ಅವರು, ವಿಶ್ವದಲ್ಲಿ ತಾಂತ್ರಿಕತೆ ಬೆಳೆಯುತ್ತಿದೆ. ಅಂತೆಯೇ ಸಾಮಾಜಿಕ ಜಾಲತಾಣಗಳ ಬಳಕೆ ಕೂಡ ಹೆಚ್ಚಾಗುತ್ತಿದೆ. ಆದರೆ

ಸಾಮಾಜಿಕ ಜಾಲತಾಣಗಳನ್ನು ಎಷ್ಟು ಪರಿಣಾಮಕಾರಿಯಾಗಿ ಬಳಕೆ ಮಾಡಬಹುದು ಎಂಬುದೇ ಪ್ರಶ್ನೆ.  ಈ ವಿಚಾರದಲ್ಲಿ ನಾನು ಭಾರತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶಂಸಿಸುತ್ತೇನೆ. ಅಂತರ್ಜಾಲ ಸೇವೆ ತಲುಪುವುದೇ ಕಷ್ಟ ಎನ್ನುವಂತಹ ಭಾರತ ದೇಶದಲ್ಲಿ ಫೇಸ್ ಬುಕ್ ಮತ್ತು ಅಂತರ್ಜಾಲದ ಮೂಲಕ ಕ್ರಾಂತಿ ಮಾಡಿದ್ದಾರೆ ಎಂದು ಹೇಳಿದರು.

'ಅಂತರ್ಜಾಲವನ್ನು ಬಳಸಿಕೊಂಡು ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರದ ವೇಳೆ ಜನರನ್ನು ತಲುಪಿದರು. ಅಂತರ್ಜಾಲವನ್ನು ಹೇಗೆ ಬಳಕೆ ಮಾಡಬಹುದು ಎಂಬುದನ್ನು ಮೋದಿ ಅವರು ಸಮರ್ಥವಾಗಿ ಬಳಕೆ ಮಾಡಿ ತೋರಿಸಿದರು ಎಂದು ಜುಕರ್ ಬರ್ಗ್ ಹೇಳಿದರು.

ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ್ದ  ಜುಕರ್‌ಬರ್ಗ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಸ್ವಚ್ಛ ಭಾರತ ಅಭಿಯಾನಕ್ಕೆ ಕೂಡ ವಿಶೇಷ ಆ್ಯಪ್‌ ಸಿದ್ಧಪಡಿಸಿ ಕೊಡುವ ಭರವಸೆ ಕೂಡ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡುವುದಿಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video

ಹೀಗೂ ಉಂಟೆ?: BJP ಶಾಸಕನ ಬಂಗಲೆ ತೊಳೆಯಲು ಹೋದ ಅಗ್ನಿಶಾಮಕ ವಾಹನ; ವಿಡಿಯೋ ವೈರಲ್‌ ಬೆನ್ನಲ್ಲೇ ₹2,700 ದಂಡ!