ರಾಮ್‌ಸುಂದರ್ ದಾಸ್ 
ದೇಶ

ಬಿಹಾರ ಮಾಜಿ ಸಿಎಂ, ರಾಮ್‌ಸುಂದರ್ ದಾಸ್ ನಿಧನ

ಪಾಟ್ನಾ: ಜೆಡಿಯು ಹಿರಿಯ ನಾಯಕ ಹಾಗೂ ಬಿಹಾರ ಮಾಜಿ ಮುಖ್ಯಮಂತ್ರಿ ರಾಮ್‌ಸುಂದರ್ ದಾಸ್ ಅವರು ಶುಕ್ರವಾರ ನಿಧನರಾಗಿದ್ದಾರೆ.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ದಾಸ್ ಅವರು ಎರಡು ದಿನಗಳ ಹಿಂದಷ್ಟೇ ಪಾಟ್ನಾ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ದಾಸ್ ಅವರು ಇಬ್ಬರು ಪುತ್ರರನ್ನು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ. 1979ರಲ್ಲಿ ಬಿಹಾರದ ಮುಖ್ಯಮಂತ್ರಿಯಾಗಿದ್ದ ದಾಸ್, 2009ರ ಲೋಕಸಭೆ ಚುನಾವಣೆಯಲ್ಲಿ ರಾಮ್ ವಿಲಾಸ್ ಪಾಸ್ವಾನ್ ವಿರುದ್ಧ ಸ್ಪರ್ಧಿಸಿ ಜಯ ಗಳಿಸಿದ್ದರು. ಆದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದರು.

ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ದಾಸ್ ಅವರ ನಿವಾಸಕ್ಕೆ ಧಾವಿಸಿದ್ದು, ತಮ್ಮ ನಿವಾಸದಲ್ಲಿ ಆಯೋಜಿಸಿದ್ದ ಹೋಳಿ ಆಚರಣೆಯನ್ನು ರದ್ದುಗೊಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel