ಇಂಡಿಯಾಸ್ ಡಾಟರ್ ಪ್ರಸಾರಕ್ಕೆ ತಡೆ ವಿರೋಧಿಸಿ ಎನ್ ಡಿಟಿವಿ ಪ್ರತಿಭಟನೆ 
ದೇಶ

'ಇಂಡಿಯಾಸ್ ಡಾಟರ್': ಪ್ರಸಾರಕ್ಕೆ ತಡೆ ವಿರೋಧಿಸಿ ಎನ್ ಡಿಟಿವಿ ಪ್ರತಿಭಟನೆ

ದೆಹಲಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಮುಕೇಶ್ ಸಿಂಗ್ ಸಂದರ್ಶನ ಒಳಗೊಂಡಿರುವ ಬಿಬಿಸಿಯ ವಿವಾದಾತ್ಮಕ 'ಇಂಡಿಯಾಸ್ ಡಾಟರ್' ...

ನವದೆಹಲಿ: ದೆಹಲಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಮುಕೇಶ್ ಸಿಂಗ್ ಸಂದರ್ಶನ ಒಳಗೊಂಡಿರುವ ಬಿಬಿಸಿಯ ವಿವಾದಾತ್ಮಕ 'ಇಂಡಿಯಾಸ್ ಡಾಟರ್' ಸಾಕ್ಷ್ಯ ಚಿತ್ರವನ್ನು ಭಾರತದಲ್ಲಿ ಪ್ರಸಾರ ಮಾಡದಂತೆ ನಿಷೇಧ ಹೇರಿರುವ ಕುರಿತಂತೆ ಖಾಸಗಿ ಸುದ್ದಿ ವಾಹಿನಿ ಎನ್ ಟಿವಿ ಭಾನುವಾರ ಪ್ರತಿಭಟನೆ ನಡೆಸಿದೆ.

ನಿನ್ನೆ ರಾತ್ರಿ 9 ಗಂಟೆಯಿಂದ 10 ಗಂಟೆಯವರೆಗೆ ಯಾವುದೇ ಸುದ್ದಿಗಳನ್ನು ಪ್ರಸಾರ ಮಾಡದೆ 'ಇಂಡಿಯಾಸ್ ಡಾಟರ್' ಎಂಬ ಬರವಣಿಗೆಯೊಂದಿಗೆ ಕಪ್ಪು ಸ್ಕ್ರೀನ್ ಹಾಗೂ ದೀಪದ ಬೆಳಕಿರುವ ಚಿತ್ರವೊಂದನ್ನು 1 ಗಂಟೆಯವರೆಗೂ ಹಾಕುವ ಮೂಲಕ ಚಾನೆಲ್ ಪ್ರತಿಭಟನೆ ಮಾಡಿದೆ.

ಸಾಕ್ಷ್ಯ ಚಿತ್ರ ನಿಷೇಧ ಕುರಿತಂತೆ ಸಾರ್ವಜನಿಕವಾಗಿ ತಮ್ಮ ಟ್ವಿಟರ್ ಖಾತೆಯ ಮೂಲಕ ಹೇಳಿಕೆ ನೀಡಿರುವ ಸುದ್ದಿ ವಾಹಿನಿಯ ಸಂಪಾದಕೀಯ ನಿರ್ದೇಶಕಿ ಸೋನಿಯಾ ಸಿಂಗ್ ಅವರು, ನಮ್ಮ ಕೂಗು ಕೇಳುವವರೆಗೂ ಹೋರಾಟ ನಡೆಸುತ್ತೇವೆ. ಯಾವುದೇ ಕಾರಣಕ್ಕೂ ಹೋರಾಟ ನಿಲ್ಲುವುದಿಲ್ಲ ಎಂದಿದ್ದಾರೆ.

ದೆಹಲಿ ಅತ್ಯಾಚಾರ ಪ್ರಕರಣದ ಅಪರಾಧಿ ಮುಕೇಶ್ ಸಿಂಗ್ನ ಸಂದರ್ಶನ ಒಳಗೊಂಡಿರುವ ವಿವಾದಾತ್ಮಕ ಸಾಕ್ಷ್ಯಚಿತ್ರ ಪ್ರಸಾರ ಮಾಡದಂತೆ ಬಿಬಿಸಿಗೆ ಸರ್ಕಾರ ಹಾಗೂ ನ್ಯಾಯಾಂಗ ಸೂಚನೆ ನೀಡಿತ್ತು. ಸಾಕ್ಷ್ಯಚಿತ್ರದಲ್ಲಿ ಅತ್ಯಾಚಾರಕ್ಕೊಳಗಾದ ನಿರ್ಭಯಾ ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಅಂಶಗಳಿವೆ ಎಂದು ಕೇಂದ್ರ ಸರ್ಕಾರ ಆರೋಪಿಸಿತ್ತು. ಹೀಗಾಗಿ ನಿರ್ಮಾಪಕಿ ಲೆಸ್ಲಿ ಉಡ್ವಿನ್ ಅವರ 'ಇಂಡಿಯಾಸ್ ಡಾಟರ್' ಸಾಕ್ಷ್ಯಚಿತ್ರಕ್ಕೆ ದೇಶಾದ್ಯಂತ ನಿಷೇಧ ಹೇರಿತ್ತು.

ಈ ಸಾಕ್ಷ್ಯಚಿತ್ರವನ್ನು ಮಹಿಳಾ ದಿನಾಚರಣೆಯಾದ ಮಾರ್ಚ್8 ರಂದು ಪ್ರಸಾರ ಮಾಡಲು ಬಿಬಿಸಿ ನಿರ್ಧರಿಸಿತ್ತು. ಆದರೆ ಇದನ್ನು ಪ್ರಸಾರ ಮಾಡದಂತೆ ಭಾರತ ಸರ್ಕಾರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ನಿನ್ನೆ ಎನ್ಡಿಟಿವಿ ಸುದ್ದಿ ವಾಹಿನಿಯು 1 ಗಂಟೆಯ ಕಾಲ ಸುದ್ದಿ ಪ್ರಸಾರ ಮಾಡದೆ ಪ್ರತಿಭಟನೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video