ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ 
ದೇಶ

ಭೂ ಸ್ವಾಧೀನ ಕಾಯ್ದೆ: ತೊಡಕಿದ್ದರೆ ವಿಪಕ್ಷಗಳಿಂದ ಸಲಹೆ

ಭೂ ಸ್ವಾಧೀನ ಕಾಯ್ದೆಯಲ್ಲಿ ತಿದ್ದುಪಡಿಯಲ್ಲಿ ತೊಡಕುಗಳು ಕಂಡುಬಂದಿದ್ದರೆ, ವಿರೋಧ ಪಕ್ಷಗಳು ಮುಕ್ತವಾಗಿ ಸಲಹೆ ನೀಡಬಹುದು ಎಂದು ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಸೋಮವಾರ ಹೇಳಿದ್ದಾರೆ...

ನವದೆಹಲಿ: ಭೂ ಸ್ವಾಧೀನ ಕಾಯ್ದೆಯಲ್ಲಿ ತಿದ್ದುಪಡಿಯಲ್ಲಿ ತೊಡಕುಗಳು ಕಂಡುಬಂದಿದ್ದರೆ, ವಿರೋಧ ಪಕ್ಷಗಳು ಮುಕ್ತವಾಗಿ ಸಲಹೆ ನೀಡಬಹುದು ಎಂದು ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಸೋಮವಾರ ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಭೂ ಸ್ವಾಧೀನ ತಿದ್ದುಪಡಿ ಕಾಯ್ದೆ ಕುರಿತಂತೆ ಇಂದು ನವದೆಹಲಿಯಲ್ಲಿ ಮಾತನಾಡಿರುವ ರಾಧಾ ಮೋಹನ್ ಸಿಂಗ್ ಅವರು, ಸರ್ಕಾರ ಹಳ್ಳಿ, ಬಡಜನರು ಹಾಗೂ ರೈತರ ಅಭಿವೃದ್ಧಿಗಾಗಿ ಇದೆ. ಭೂ ಸ್ವಾಧೀನ ತಿದ್ದುಪಡಿ ಕಾಯ್ದೆಯು ರೈತರ ಪರವಾಗಿದೆ. ರೈತರಿಗಾಗಿ ಸರ್ಕಾರ ಹಲವು ಅಭಿವೃದ್ಧಿ ಕಾರ್ಯಗಳ ಕುರಿತಂತೆ ಕೆಲಸ ಹಾಗೂ ಯೋಜನೆಗಳು ರೂಪಿಸುತ್ತಿದೆ. ಕಾಯ್ದೆಯು ರೈತರ ವಿರುದ್ಧವಾಗಿದೆ ಎಂದು ವಿಪಕ್ಷಗಳಿಗೆ ಎನಿಸಿದರೆ ಅಥವಾ ಕಾಯ್ದೆಯಲ್ಲಿ ತೊಡಕುಗಳು ಕಂಡುಬಂದಿದ್ದರೆ ಮುಕ್ತವಾಗಿ ತಮ್ಮ ಸಲಹೆಗಳನ್ನು ನೀಡಬಹುದು ಎಂದು ಹೇಳಿದ್ದಾರೆ.

ಭೂಸ್ವಾಧೀನ ಸುಗ್ರೀವಾಜ್ಞೆ ಕಾಯ್ದೆಯನ್ನು ಈ ಹಿಂದೆ 2013ರಲ್ಲಿ ಅಸ್ತಿತ್ವದಲ್ಲಿದ್ದ ಯುಪಿಎ ಸರ್ಕಾರ ತಿದ್ದುಪಡಿ ಮಾಡಿತ್ತು. ಈ ಕಾಯ್ದೆಯನ್ನೇ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ  ಸಾಮಾಜಿಕ ಆರ್ಥಿಕ ತೆರಿಗೆ(ಎಸ್‌ಐಎ) ಅಡಿಯಲ್ಲಿ ಕೆಲವು ತಿದ್ದುಪಡಿಗಳನ್ನು ಮಾಡಿದೆ ಅಷ್ಟೇ. ಕಾಯ್ದೆ ಕುರಿತ ವಿರೋಧ ಪಕ್ಷಗಳ ಸಲಹೆಗಳನ್ನು ಸ್ವೀಕರಿಸಿ, ಸಲಹೆ ಸರಿಯಿದ್ದರೆ ಅದನ್ನು ಅನುಷ್ಠಾನಕ್ಕೆ ತರುವುದಾಗಿಯೂ ಎನ್‌ಡಿಎ ಸರ್ಕಾರ ಹೇಳಿತ್ತು ಎಂದು ಹೇಳಿದ್ದಾರೆ.

ಇದೇ ವೇಳೆ ಭೂ ಸುಗ್ರೀವಾಜ್ಞೆ ಕುರಿತಂತೆ ಪರಿಹಾರ ಸಮಾನ ಹಕ್ಕು, ಭೂ ಸ್ವಾಧೀನದಲ್ಲಿ ಪಾರದರ್ಶಕತೆ, ಪುನರ್ವಸತಿ ತಿದ್ದುಪಡಿ ಮಸೂದೆ ಕುರಿತ ವಿಷಯಗಳನ್ನು ಲೋಕಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel