ಅತ್ಯಾಚಾರಿ ಹತ್ಯೆ: 22 ಮಂದಿ ಬಂಧನ
ದಿಮಾಪುರದಲ್ಲಿ ನಡೆದ ಅತ್ಯಾಚಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಗಾಲ್ಯಾಂಡ್ ಪೊಲೀಸರು ಭಾನುವಾರ 22 ಮಂದಿಯನ್ನು ಬಂಧಿಸಿದ್ದಾರೆ...
ನವದೆಹಲಿ: ದಿಮಾಪುರದಲ್ಲಿ ನಡೆದ ಅತ್ಯಾಚಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಗಾಲ್ಯಾಂಡ್ ಪೊಲೀಸರು ಭಾನುವಾರ 22 ಮಂದಿಯನ್ನು ಬಂಧಿಸಿದ್ದಾರೆ.
ಮತ್ತಷ್ಟು ಮಂದಿಯ ಬಂಧನಕ್ಕೆ ಬಲೆ ಬೀಸಿದ್ದಾರೆ. ಈ ನಡುವೆ, ಹತ್ಯೆಗೀಡಾದ ಅತ್ಯಾಚಾರಿಯ ಅಂತ್ಯಸಂಸ್ಕಾರ ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ನೆರವೇರಿತು. ಈ ಹತ್ಯೆಯ ಹಿನ್ನೆಲೆಯಲ್ಲಿ ಅಸ್ಸಾಂನ ಮೂರು ಜಿಲ್ಲೆಗಳಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಭಾನುವಾರವೂ ಅನೇಕ ಅಂಗಡಿ- ಮುಂಗಟ್ಟುಗಳು ಬಹುತೇಕ ಬಾಗಿಲು ಮುಚ್ಚಿದ್ದವು. ಅಲ್ಲಲ್ಲಿ ಪ್ರತಿಭಟನೆಗಳು ನಡೆದವು.
ಇಂಟರ್ನೆಟ್ ಬ್ಲಾಕ್
ಅತ್ಯಾಚಾರಿಯನ್ನು ಜೈಲಿನಿಂದ ಹೊರಗೆಳೆದು ಸಾರ್ವಜನಿಕರು ಹಲ್ಲೆ ಮಾಡುತ್ತಿರುವ ವಿಡಿಯೋ ಅಂತರ್ಜಾಲದಲ್ಲಿ ಹರಿದಾಡುತ್ತಿರುವುದು ನಾಗಾಲ್ಯಾಂಡ್ ಸರ್ಕಾರದ ತಲೆನೋವನ್ನು ಮತ್ತಷ್ಟು ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ಅಂತರ್ಜಾಲದ ಮೇಲೆ ಸರ್ಕಾರ 48 ಗಂಟೆಗಳ ಕಾಲ ನಿಷೇಧ ಹೇರಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.