ತೊಗಾಡಿಯಾ ನಿರ್ಬಂಧ ಎತ್ತಿಹಿಡಿದ ಹೈಕೋರ್ಟ್
ವಿಎಚ್ ಪಿ ಮುಖಂಡ ಪ್ರವೀಣ್ ತೊಗಾಡಿಯಾ ಮೈಸೂರು ಪ್ರವೇಶಕ್ಕೆ ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ...
ಬೆಂಗಳೂರು: ವಿಎಚ್ ಪಿ ಮುಖಂಡ ಪ್ರವೀಣ್ ತೊಗಾಡಿಯಾ ಮೈಸೂರು ಪ್ರವೇಶಕ್ಕೆ ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಮೈಸೂರಿಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮಾ.8ರಂದು ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ತೊಗಾಡಿಯಾ ಹೈಕೋರ್ಟ್ ಮೆಟ್ಟಿಲೇರಿದ್ದರು.
ವಿಚಾರಣೆ ನಡೆಸಿದ ನ್ಯಾ.ಅಬ್ದುಲ್ ನಜೀರ್ ಅವರ ಏಕಸದಸ್ಯ ಪೀಠ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತ ತೊಗಾಡಿಯಾಗೆ ನಿರ್ಬಂಧ ವಿಧಿಸಿದೆ. ಈ ವಿಚಾರದಲ್ಲಿ ಕೋರ್ಟ್ ಮಧ್ಯೆ ಪ್ರವೇಶಿಸಲು ಬಯಸುವುದಿಲ್ಲ. ಜಿಲ್ಲಾಡಳಿತದ ಆದೇಶದಲ್ಲಿ ದುರುದ್ದೇಶವಿಲ್ಲ. ಅಲ್ಲದೇ ಕಾರ್ಯಕ್ರಮಕ್ಕೆ ನಿರ್ಬಂಧ ವಿಧಿಸಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ತಿರಸ್ಕರಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.