ಲಂಡನ್ ನಲ್ಲಿ ಅನಾವರಣಗೊಂಡ ಗಾಂಧಿ ಪ್ರತಿಮೆ 
ದೇಶ

ಲಂಡನ್ ಪಾರ್ಲಿಮೆಂಟ್ ಸ್ಕ್ವೇರ್ ನಲ್ಲಿ ಗಾಂಧಿ ಪ್ರತಿಮೆ ಅನಾವರಣ

ಲಂಡನ್​ನ ಪ್ರತಿಷ್ಠಿತ ಪಾರ್ಲಿಮೆಂಟ್ ಸ್ಕ್ವೇರ್ ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಕಂಚಿನ ಪ್ರತಿಮೆಯನ್ನು ಶನಿವಾರ ಅನಾವರಣಗೊಳಿಸಲಾಯಿತು...

ಲಂಡನ್: ಲಂಡನ್​ನ ಪ್ರತಿಷ್ಠಿತ ಪಾರ್ಲಿಮೆಂಟ್ ಸ್ಕ್ವೇರ್ ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಕಂಚಿನ ಪ್ರತಿಮೆಯನ್ನು ಶನಿವಾರ ಅನಾವರಣಗೊಳಿಸಲಾಯಿತು.

ಬ್ರಿಟನ್ ಪ್ರಧಾನಿ ಡೇವಿಡ್ ಕ್ಯಾಮರೋನ್ ಮತ್ತು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸಿದರು. ಬ್ರಿಟನ್ ಸರ್ಕಾರ ಗಾಂಧೀಜಿ ಪ್ರತಿಮೆ ಅನಾವರಣ ಸಮಾರಂಭಕ್ಕೆ ಜೇಟ್ಲಿಯವರನ್ನು ಅಹ್ವಾನಿಸಿತ್ತು. ಕಾರ್ಯಕ್ರಮಕ್ಕೆ ಗಾಂಧೀಜಿಯವರ ಮೊಮ್ಮಗ ಮತ್ತು ಪಶ್ಚಿಮ ಬಂಗಾಳ ಮಾಜಿ ರಾಜ್ಯಪಾಲರಾದ ಗೋಪಾಲಕೃಷ್ಣ ಗಾಂಧಿ ಮತ್ತು ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಅವರು ಉಪಸ್ಥಿತರಿದ್ದರು.

ವಿಶ್ವದ ರಾಜಕೀಯ ಇತಿಹಾಸದಲ್ಲಿ ಅತ್ಯುನ್ನತ ಸ್ಥಾನ ಪಡೆದಿರುವ ಮಹಾತ್ಮಾ ಗಾಂಧಿಯವರ ಪ್ರತಿಮೆಯನ್ನು ಪಾರ್ಲಿಮೆಂಟ್ ಸ್ಕ್ವೇರ್ ನಲ್ಲಿ ಸ್ಥಾಪಿಸಿರುವುದು ಅವರಿಗೆ ನಾವು ತೋರಿರುವ ಗೌರವವಾಗಿದೆ. ಆ ಮೂಲಕ ಲಂಡನ್​ನಲ್ಲಿ ಅವರ ನೆನಪುಗಳನ್ನು ಉಳಿಸುವ ಪ್ರಯತ್ನವಾಗಿದೆ ಎಂದು ಬ್ರಿಟನ್ ಪ್ರಧಾನಿ ಡೇವಿಡ್ ಕ್ಯಾಮರೂನ್ ತಿಳಿಸಿದರು. ಗಾಂಧಿ ಪ್ರತಿಮೆಯು ಗಾಂಧೀಜಿಯವರ ತತ್ವಾದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸಲು ಅನುಕೂಲವಾಗಲಿದೆ. ಬ್ರಿಟನ್ ಸರ್ಕಾರದ ಈ ಕ್ರಮದಿಂದಾಗಿ ಉಭಯ ದೇಶಗಳ ನಡುವಿನ ಸಂಬಂಧವನ್ನು ವೃದ್ಧಿಸಲಿದೆ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ತಿಳಿಸಿದ್ದಾರೆ.

ಮಹಾತ್ಮಾ ಗಾಂಧೀಜಿ 1931ರಲ್ಲಿ ಲಂಡನ್​ಗೆ ತೆರಳಿದ್ದಾಗ ತೆಗೆದಿದ್ದ ಫೋಟೋದಿಂದ ಸ್ಪೂರ್ತಿ ಪಡೆದಿದ್ದ ಕಲಾವಿದ ಫಿಲಿಪ್ ಜಾಕ್ಸನ್ ಅವರು ಕಷ್ಟಪಟ್ಟು ಈ ಸುಂದರ ಪ್ರತಿಮೆಯನ್ನು ರೂಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೆ. 9ರಂದು ಗೃಹ ಸಚಿವಾಲಯದೊಂದಿಗೆ ಮಾತುಕತೆಗೆ ಮುನ್ನ ಹೋರಾಟ ತೀವ್ರ: ಲಡಾಖ್ ಉನ್ನತ ಮಂಡಳಿ ಎಚ್ಚರಿಕೆ

ಕೇರಳಂನ ತ್ರಿಶೂರ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ತಮಿಳು ನಾಡಿನ ಎಂಟು ಮಂದಿ ಸಾವು, 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು; Video

ಮತ್ತೊಂದು ಮಹಾಯುದ್ಧದ ಭೀತಿ: ಇರಾನ್‌ನ 'Pickaxe Mountain' ಧ್ವಂಸಕ್ಕೆ ಅಮೆರಿಕ ಸ್ಕೆಚ್, "ಶೀಘ್ರದಲ್ಲೇ ದಾಳಿ" ಎಂದ ಡೊನಾಲ್ಡ್ ಟ್ರಂಪ್..!

ಪ್ರಧಾನಿ ಮೋದಿ ಮೆಚ್ಚಿದ ಇಡ್ಲಿ ನಿಂಗಮ್ಮನಿಗೆ ಸಂಕಷ್ಟ: ಅಂಗಡಿ ನಡೆಸದಂತೆ GBA ಅಧಿಕಾರಿಗಳ ವಾರ್ನಿಂಗ್!

CJP ಪ್ರತಿಭಟನೆ ವೇಳೆ ಹೆಸರು ದುರುಪಯೋಗ: 'ಬಲಪಂಥೀಯ' ಇನ್‌ಫ್ಲ್ಯುಯೆನ್ಸರ್ ವಿರುದ್ಧ ಕೇಸ್ ದಾಖಲಿಸಿದ ಚಿರಾಗ್ ಪಾಸ್ವಾನ್