ಸ್ಪೀಕರ್ ಕುರ್ಚಿ 
ದೇಶ

ಕೇರಳ ವಿಧಾನಸಭೆಯಲ್ಲಿ ಗದ್ದಲ: ಐವರು ಎಲ್‌ಡಿಎಫ್ ಶಾಸಕರ ಅಮಾನತು

ಕೊಚ್ಚಿ: ಕೇರಳ ವಿಧಾನಸಭೆಯಲ್ಲಿ ಎರಡು ದಿನಗಳ ಹಿಂದಷ್ಟೆ ನಡೆದ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಕೋಲಾಹಲಕ್ಕೆ ಸಂಬಂಧಿಸಿದಂತೆ ಸೋಮವಾರ ಐವರು ಎಲ್‌ಡಿಎಫ್ ಶಾಕರನ್ನು ಸದನದಿಂದ ಅಮಾನತುಗೊಳಿಸಲಾಗಿದೆ.

ಕಳೆದ ಶುಕ್ರವಾರ ಬಜೆಟ್ ಅಧಿವೇಶನದ ವೇಳೆ ಸ್ಪೀಕರ್ ಕುರ್ಚಿ ಧ್ವಂಸಗೊಳಿಸಿದ ಆರೋಪದ ಮೇಲೆ ಎಲ್‌ಡಿಎಫ್‌ನ ಕೆ.ಕುಂಜಹಮ್ಮದ್ ಮಾಸ್ಟರ್, ಇಪಿ ಜಯರಾಜನ್, ಕೆ.ಅಜಿತ್ ಕೆ.ಟಿ. ಜಲೀಲ್ ಹಾಗೂ ವಿ ಶಿವನ್ ಕುಟ್ಟಿ ಅವರನ್ನು ಅಮಾನತುಗೊಳಿಸಲಾಗಿದೆ.

ಕೇರಳ ಮುಖ್ಯಮಂತ್ರಿ ಉಮನ್ ಚಾಂಡಿ ಅವರು ಶಾಸಕರ ವಿರುದ್ಧ ಅಮಾನತು ಗೊತ್ತುವಳಿ ಮಂಡಿಸಿದರು.

ಈ ಮಧ್ಯೆ, ಸಿಪಿಐ-ಎಂ ನಾಯಕ ವಿ.ಎಸ್. ಅಚ್ಚುತಾನಂದನ್ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಿರುವುದನ್ನು 'ಏಕಪಕ್ಷಿಯ' ನಿರ್ಧಾರ ಎಂದು ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷಗಳು, ಮಹಿಳಾ ಶಾಸಕರೊಂದಿಗೆ ಅಸಭ್ಯವಾಗಿ ವರ್ತಿಸಿದವರ ವಿರುದ್ಧ ಏಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಪ್ರಶ್ನಿಸಿವೆ.

ಕೇರಳ ವಿಧಾನಸಭೆಯಲ್ಲಿ ಹಣಕಾಸು ಸಚಿವ ಕೆ.ಎಂ ಮಾಣಿ ಬಜೆಟ್ ಮಂಡನೆ ವೇಳೆ ವಿಪಕ್ಷಗಳು ತೀವ್ರ ಗದ್ದಲ ಎಬ್ಬಿಸಿದ್ದವು. ಮಾಣಿ ವಿರುದ್ಧ ಬಾರ್ ಲೈಸೆನ್ಸ್ ಗೆ ಬೇಡಿಕೆ ಇಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ ಮಾಣಿ ಅವರು ಬಜೆಟ್ ಮಂಡನೆ ಮಾಡದಂತೆ ವಿಪಕ್ಷ ಸಿಪಿಎಂ ತೀವ್ರ ಪ್ರತಿಭಟನೆ ನಡೆಸಿದೆ ಈ ನಡುವೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ಸಿಪಿಎಂ ಶಾಸಕರು ಪರಸ್ಪರ ಕೈ ಕೈ ಮೀಲಾಯಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ