ಅಹಮದಾಬಾದ್ : ಜಮ್ಮು ಮತ್ತು ಕಾಶ್ಮೀರದ ಸಮಸ್ಯೆ ಬಗೆಹರಿಯದಿದ್ದರೆ ಸರ್ಕಾರದಿಂದ ಕೆಳಗಿಳಿಯಲು ಬಿಜೆಪಿ ಸಿದ್ಧ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ನಮ್ಮ ಮೇಲೆ ಭರವಸೆ ಇಟ್ಟು ದೇಶದ ಜನತೆ ದೊಡ್ಡ ಜವಾಬ್ದಾರಿ ಹೊರಸಿದ್ದಾರೆ. ಆ ಜವಾಬ್ದಾರಿಯನ್ನು ನಿಭಾಯಿಸುವುದು ನಮ್ಮ ಕರ್ತವ್ಯ.ಅಧಿಕಾರಕ್ಕಾಗಿ ರಾಷ್ಟ್ರೀಯ ಹಿತಾಸಕ್ತಿ ವಿಚಾರದಲ್ಲಿ ರಾಜಿಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಅಮಿತ್ ಶಾ ತಿಳಿಸಿದ್ದಾರೆ.
ಸರ್ಕಾರ ಪ್ರತ್ಯೇಕತಾವಾದಿಗಳ ಪರ ಧೋರಣೆಯನ್ನು ಮರುಪರಿಶೀಲಿಸದಿದ್ದರೆ, ಬಿಜೆಪಿ ಪಿಡಿಪಿಯೊಂದಿಗಿನ ಮೈತ್ರಿ ಕಳೆದುಕೊಂಡು ಸರ್ಕಾರದಿಂದ ಕೆಳಗಿಳಿಯಲು ಸಿದ್ಧ ಎಂದು ಅಮಿತ್ ಶಾ ಪಿಡಿಪಿಗೆ ಎಚ್ಚರಿಸಿದ್ದಾರೆ.
ಜಮ್ಮು ಕಾಶ್ಮೀರದ ಸಮಸ್ಯೆ ಬಗೆಹರಿಸಲೆಂದೇ ಬಿಜೆಪಿ ಪಿಡಿಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದು. ಇದಕ್ಕೆ ಸೂಕ್ತ ಪರಿಹಾರ ಕೂಡ ಹುಡುಕುತ್ತೇವೆ ಎಂಬ ನಂಬಿಕೆ ಇದೆ. ಆದರೆ ಅದು ಸಾಧ್ಯವಾಗದಿದ್ದರೆ ಬಿಜೆಪಿ ಪಿಡಿಪಿಯೊಂದಿಗಿನ ಮೈತ್ರಿಯಿಂದ ಹೊರಬರಲು ಸಿದ್ಧ ಎಂದು ಅವರು ಹೇಳಿದ್ದಾರೆ.