ಸಿಆರ್ಪಿಎಫ್ 
ದೇಶ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಎನ್ ಕೌಂಟರ್ ಮುಕ್ತಾಯ: 6 ಸಾವು

ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ಮೈತ್ರಿಯಲ್ಲಿ ಪಿಡಿಪಿಯ ಮುಫ್ತಿ ಮೊಹಮ್ಮದ್ ಶಯೀದ್ ಮುಖ್ಯಮಂತ್ರಿಯಾಗಿ ಇದೇ ತಿಂಗಳಲ್ಲಿ ಪ್ರಮಾಣವಚನ ಸ್ವೀಕರಿಸಿ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ಮೈತ್ರಿಯಲ್ಲಿ ಪಿಡಿಪಿಯ ಮುಫ್ತಿ ಮೊಹಮ್ಮದ್ ಶಯೀದ್ ಮುಖ್ಯಮಂತ್ರಿಯಾಗಿ ಇದೇ ತಿಂಗಳಲ್ಲಿ ಪ್ರಮಾಣವಚನ ಸ್ವೀಕರಿಸಿ ಸರ್ಕಾರ ರಚನೆಯ ಬೆನ್ನಲ್ಲೇ ಜಮ್ಮುವಿನಲ್ಲಿ ಉಗ್ರರು ತಮ್ಮ ಅಟ್ಟಹಾಸ ಮುಂದುವರೆಸಿದ್ದಾರೆ.

ಕಟುವಾ ಜಿಲ್ಲೆಯ ಪೊಲೀಸ್ ಠಾಣೆ ಮೇಲೆ ಉಗ್ರರು ದಾಳಿ ಮಾಡಿ ಇಬ್ಬರು ಪೊಲೀಸರನ್ನು ಹತ್ಯೆಗೈದಿದ್ದಾರೆ. ಈ ನಡುವೆ ಉಗ್ರರ ಹಾಗೂ ಭದ್ರತಾ ಸಿಬ್ಬಂದಿಗಳ ನಡುವೆ 6 ಗಂಟೆಗಳ ಕಾಲ ಎನ್ ಕೌಂಟರ್ ಕಾರ್ಯಾಚರಣೆ ನಡೆದಿದ್ದು, ಭದ್ರತಾ ಸಿಬ್ಬಂದಿಗಳ ಗುಂಡೇಟಿಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇದೇ ವೇಳೆ ಇಬ್ಬರು ಸಿಆರ್ ಪಿಎಫ್ ಯೋಧರು, ಓರ್ವ ಪೊಲೀಸ್ ಹಾಗೂ ಓರ್ವ ನಾಗರಿಕ ಸಹ ಮೃತಪಟ್ಟಿದ್ದಾರೆ.

ಈ ಬಗ್ಗೆ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಉಗ್ರರ ವಿರುದ್ಧದ ಎನ್ ಕೌಂಟರ್ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂದರು. ಅಲ್ಲದೆ ಇದರಲ್ಲಿ ಮೂವರು ಭದ್ರತಾ ಸಿಬ್ಬಂದಿ, ಓರ್ವ ನಾಗರೀಕನು ಮೃತಪಟ್ಟಿರುವುದಾಗಿ ಮಾಹಿತಿ ನೀಡಿದರು. ಅಲ್ಲದೆ ಉಗ್ರರ ದಾಳಿಗೆ ಬಲಿಯಾದ ನಾಗರೀಕನಿಗೆ ಸಹಾನೂಭೂತಿ ವ್ಯಕ್ತಪಡಿಸಿದರು.

ಕಟುವಾ ಜಿಲ್ಲೆಯ ರಾಜ್ ಭಾಗ್ ಪೊಲೀಸ್ ಠಾಣೆ ಮೇಲೆ ಸುಮಾರು 3-4 ಉಗ್ರರ ಗುಂಪು ದಾಳಿ ಮಾಡಿದ್ದು, ಪೊಲೀಸರ ಮೇಲೆ ಮನಸೋ ಇಚ್ಛೆ ಗುಂಡಿನ ಮಳೆಗರೆದಿದ್ದಾರೆ. ಮೂಲಗಳ ಪ್ರಕಾರ ಈಗಾಗಲೇ ಉಗ್ರರು ಇಬ್ಬರು ಪೊಲೀಸರನ್ನು ಹತ್ಯೆಗೈದಿದ್ದರು.

ಇಂದು ಬೆಳಗ್ಗೆ ಸುಮಾರು 6ಗಂಟೆಯ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಗಡಿಯಿಂದ ಕೇವಲ 15 ಕಿ.ಮೀ ದೂರದಲ್ಲಿರುವ ರಾಜ್ ಭಾಗ್ ಪೊಲೀಸ್ ಠಾಣೆಗೆ ಸೈನಿಕ ಸಮವಸ್ತ್ರದಲ್ಲಿ ಬಂದಿದ್ದ ಉಗ್ರರು ನೋಡನೋಡುತ್ತಿದ್ದಂತೆಯೇ ಪೊಲೀಸರ ಮೇಲೆ ಗುಂಡಿನ ಮಳೆಗರೆದಿದ್ದಾರೆ ಎಂದು ಹಿರಿಯ ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಭದ್ರತಾ ಪಡೆಗಳು ದೌಡಾಯಿಸಿದ್ದು, ಕಳೆದ ಒಂದೂವರೆ ಗಂಟೆಯಿಂದ ಘಟನಾ ಸ್ಥಳದಲ್ಲಿ ಸೈನಿಕರು ಮತ್ತು ಉಗ್ರರ ನಡುವೆ ತೀವ್ರ ಗುಂಡಿನ ಚಕಮಕಿ ನಡೆಯುತ್ತಿದೆ.

ಪ್ರಸ್ತುತ ಉಗ್ರರ ದಾಳಿಯಿಂದಾಗಿ ಶ್ರೀನಗರಕ್ಕೆ ಸಂಪರ್ಕ ಕಲ್ಪಿಸುವ ಜಮ್ಮುವಿನ ರಾಷ್ಟ್ರೀಯ ಹೆದ್ದಾರಿ-(ಎನ್ ಹೆಚ್ 1) ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿದ್ದು, ಯಾವುದೇ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಉಗ್ರರ ಈ ಕುಕೃತ್ಯಕ್ಕೆ ದೇಶಾದ್ಯಂತ ತೀವ್ರ ಟೀಕೆಗಳು ವ್ಯಕ್ತವಾಗುತ್ತಿದ್ದು, ಈ ಹಿಂದೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸೈಯ್ಯದ್ ಅವರು ಪ್ರಮಾಣ ವಚನ ಸ್ವೀಕಾರ ಮಾಡುವಾಗ ಪ್ರತ್ಯೇಕತಾವಾದಿಗಳನ್ನು ಹೊಗಳಿ ಅಟ್ಟಕ್ಕೆ ಏರಿಸಿದ್ದರು. ಉಗ್ರರು ಮತ್ತು ಕಾಶ್ಮೀರ ಪ್ರತ್ಯೇಕತಾ ವಾದಿಗಳ ಸಹಕಾರದಿಂದಾಗಿ ಕಾಶ್ಮೀರದಲ್ಲಿ ಶಾಂತಿಯುತ ಮತದಾನ ನಡೆದಿದೆ ಎಂದು ಹೇಳಿದ್ದರು. ಇದೀಗ ಉಗ್ರರು ನಡೆಸಿರುವ ಈ ದುಷ್ಕೃತ್ಯಕ್ಕೆ ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆ..?

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ