ಸುಪ್ರೀಂಕೋರ್ಟ್ 
ದೇಶ

ಅಜಂಖಾನ್ ವಿರುದ್ದ ಫೇಸ್ ಬುಕ್ ಪೋಸ್ಟ್: ವರದಿ ಕೇಳಿದ ಸುಪ್ರೀಂ

ಅಜಂಖಾನ್ ವಿರುದ್ದ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿ ಬಂಧನಕ್ಕೊಳಗಾದ ವಿದ್ಯಾರ್ಥಿ ಕುರಿತಂತೆ ವಿವರ ಸಲ್ಲಿಸುವಂತೆ ಉತ್ತರಪ್ರದೇಶದ ಪೊಲೀಸರಿಗೆ ಸುಪ್ರೀಂಕೋರ್ಟ್ ಶುಕ್ರವಾರ ಸೂಚನೆ ನೀಡಿದೆ...

ನವದೆಹಲಿ: ಅಜಂಖಾನ್ ವಿರುದ್ದ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿ ಬಂಧನಕ್ಕೊಳಗಾದ ವಿದ್ಯಾರ್ಥಿ ಕುರಿತಂತೆ ವಿವರ ಸಲ್ಲಿಸುವಂತೆ ಉತ್ತರಪ್ರದೇಶದ ಪೊಲೀಸರಿಗೆ ಸುಪ್ರೀಂಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.

ಪ್ರಕರಣ ಸಂಬಂಧ ವಿದ್ಯಾರ್ಥಿಗಳಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಆದರೂ,  ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆಯ 66ಎ ಅಡಿಯಲ್ಲಿ ಹುಡುಗನನ್ನು ಬಂಧಿಸಿ 4 ದಿನಗಳ ಕಾಲ ಜೈಲಿನಲ್ಲಿರುವಂತಹ ಅಗತ್ಯವೇನಿತ್ತು. ಈ ಕುರಿತಂತೆ ಉತ್ತರ ಪ್ರದೇಶದ ಸರ್ಕಾರ ಸಂಪೂರ್ಣ ವರದಿ ನೀಡಲೇಬೇಕು ಎಂದು ಕಾನೂನು ವಿದ್ಯಾರ್ಥಿನಿ ಶ್ರೇಯಾ ಸಿಂಗಾಲ್ ಅವರು ಪಿಐಎಲ್ ಅರ್ಜಿ ಸಲ್ಲಿಸಿದ್ದರು.

ಈ ಕುರಿತಂತೆ ದಾಖಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ವಿಚಾರಣೆ ಕೈಗೆತ್ತಿಕೊಂಡ ನ್ಯಾ.ಜೆ.ಚಲಮೇಶ್ವರ ಮತ್ತು ಆರ್.ಎಫ್ ನಾರಿಮನ್ ಅವರಿದ್ದ ಪೀಠ, ಉತ್ತರ ಪ್ರದೇಶದ ಪೊಲೀಸರಿಗೆ ವಿವರಣಾತ್ಮಕ ವರದಿ ಸಲ್ಲಿಸುವಂತೆ ಸೂಚಿಸಿದ್ದು, ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆಯ ಅಡಿಯಲ್ಲಿ ಪ್ರಕರಣವನ್ನು 19 ವರ್ಷದ ಹುಡಗನ ಮೇಲೆ ದಾಖಲಿಸುವ ಅಗತ್ಯವೇನಿತ್ತು ಎಂದು ಪೊಲೀಸರನ್ನು ಪ್ರಶ್ನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!