ಡಾಕಾ: ಬಾಂಗ್ಲಾದೇಶದಲ್ಲಿ ಪೆಟ್ರೋಲ್ ಬಾಂಬ್ ದಾಳಿಗೆ ಓರ್ವ ಸಾವನ್ನಪ್ಪಿ, 8ಮಂದಿ ಗಂಭೀರ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ.
ಮುಸುಕುಧಾರಿಯಾಗಿ ಟ್ರಕ್ ನಲ್ಲಿ ಬಂದ ಅನಾಮಿಕ ವ್ಯಕ್ತಿ ಇದ್ದಕ್ಕಿದ್ದಂತೆ ಮಗುರಾ-ಜೆಸ್ಸೋರ್ ಹೆದ್ದಾರಿಯಲ್ಲಿ ಪೆಟ್ರೋಲ್ ಬಾಂಬ್ ಗಳನ್ನು ಎಸೆದಿದ್ದಾನೆ. ಇದರ ಪರಿಣಾಮ ಹೆದ್ದಾರಿಯಲ್ಲಿ ವಾಹನ ಚಾಲನೆ ಮಾಡುತ್ತಿ 9 ಮಂದಿಯ ಪೈಕಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಗಾಯಗೊಂಡರವನ್ನು ಡಾಕಾ ವೈದ್ಯಕೀಯ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ.