ನವದೆಹಲಿ: ದೆಹಲಿ ಸಂಸತ್ ಆವರಣದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೃಹತ್ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪವರ್ ಸ್ಟೇಷನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಎಸಿ ಪ್ಲಾಂಟ್ ನಿಂದ ಬೆಂಕಿ ಹತ್ತಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿಯನ್ನು ನಂದಿಸಲು 9 ಅಗ್ನಿಶಾಮಕ ವಾಹನ ಆಗಮಿಸಿದ್ದು, ಅಗ್ನಿ ಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸೋ ಕಾರ್ಯದಲ್ಲಿ ತೊಡಗಿದ್ದಾರೆ. ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ತಿಳಿದು ಬಂದಿದೆ.
ಈ ವರೆಗೆ ಯಾವುದೇ ಸಾವು ನೋವುಗಳ ಬಗ್ಗೆ ಇನ್ನೂ ವರದಿಯಾಗಿಲ್ಲ ಹಾಗೂ ಸಂಸತ್ತಿನ ವೀಕ್ಷಕರ ದ್ವಾರ ಬಾಗಿಲ ಬಳಿಯ ರಿಸೆಪ್ಶನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.