ಕಿಡಿಗೇಡಿಗಳು ಚರ್ಚ್ ಮೇಲೆ ದಾಳಿ ನಡೆಸಿದಾಗ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ 
ದೇಶ

ಮುಂಬೈ ಚರ್ಚ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

ಮುಂಬೈನ ಸೇಂಟ್ ಜಾರ್ಜ್ ಕ್ರೈಸ್ತ ಚರ್ಚ್ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಚರ್ಚ್ ಹೊರಾಂಗಣದ ಗಾಜುಗಳು ಪುಡಿ ಪುಡಿಯಾಗಿರುವ ಘಟನೆ ಪನ್ವೇಲ್ ಪ್ರದೇಶದಲ್ಲಿ ಶನಿವಾರ ಮುಂಜಾನೆ ನಡೆದಿದೆ...

ಮುಂಬೈ: ಮುಂಬೈನ ಕ್ರೈಸ್ತ ಸೇಂಟ್ ಜಾರ್ಜ್ ಚರ್ಚ್ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಚರ್ಚ್ ಹೊರಾಂಗಣದ ಗಾಜುಗಳು ಪುಡಿ ಪುಡಿಯಾಗಿರುವ ಘಟನೆ ಪನ್ವೇಲ್ ಪ್ರದೇಶದಲ್ಲಿ ಶನಿವಾರ ಮುಂಜಾನೆ ನಡೆದಿದೆ.

ಶನಿವಾರ ಬೆಳಗಿನ ಸುಮಾರು 1.30ಕ್ಕೆ ಮುಸುಕುದಾರಿಯಾಗಿ ಬೈಕ್ ನಲ್ಲಿ ಬಂದ ಕಿಡಿಕೇಡಿಗಳು ಇದ್ದಕ್ಕಿದ್ದಂತೆ ಪನ್ವೇಲ್ ಪ್ರದೇಶದಸೇಂಟ್ ಜಾರ್ಜ್ ಕ್ರೈಸ್ತ ಚರ್ಚ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ನಂತರ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ದೃಶ್ಯ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಅನಾಮಿಕ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ ಎಂದು ಮಾಜಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ರಹಂ ಮತೈ ಹೇಳಿದ್ದಾರೆ.

ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿಪೊಲೀಸ್ ಬಂದೋಬಸ್ತ್ ನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

SCROLL FOR NEXT