ದೇಶ

ಸಿಬಿಐ ಸಮನ್ಸ್: ಸುಪ್ರೀಂ ಮೆಟ್ಟಿಲೇರಿದ ಮಾಜಿ ಪ್ರಧಾನಿ

Srinivasamurthy VN

ನವದೆಹಲಿ: ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ತಮ್ಮ ವಿರುದ್ಧ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಬುಧವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಉದ್ಯಮಿ ಕುಮಾರ ಮಂಗಲಂ, ಪಿ.ಸಿ.ಪಾರಕ್ ಸೇರಿ 6 ಜನರಿಗೆ ಹಾಗೂ ಹಿಂಡಾಲ್ಕೋ ಸಂಸ್ಥೆಗೆ ಸೇರಿದ 8 ಕಂಪನಿಗಳಿಗೆ ಮಾ.11 ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಅಲ್ಲದೆ, ಮನಮೋಹನ್ ಸಿಂಗ್ ಅವರನ್ನು ಹಲವು ಬಾರಿ ವಿಚಾರಣೆಗೊಳಪಡಿಸಿತ್ತು.

ಸಿಬಿಐ ಜಾರಿ ಮಾಡಿದ ಸಮನ್ಸ್ ಕುರಿತಂತೆ ತೀವ್ರ ಅಸಮಧಾನ ವ್ಯಕ್ತಪಡಿಸಿರುವ ಮನಮೋಹನ್ ಸಿಂಗ್ ಅವರು, ಸಿಬಿಐ ಜಾರಿ ಮಾಡಿರುವ ಸಮನ್ಸ್ ಕಾನೂನು ಬದ್ಧವಾಗಿಲ್ಲ. ಸಿಬಿಐ ಅಧಿಕಾರಿಗಳು ಕಾನೂನು ರೀತಿಯ ನಿಯಮಗಳನ್ನು ಪಾಲಿಸಿಲ್ಲ. ಕಲ್ಲಿದ್ದಲು ಹಗರಣದಲ್ಲಿ ನಾನು ಭಾಗಿಯಾಗಿರುವುದಕ್ಕೆ ಸಿಬಿಐ ಅಧಿಕಾರಿಗಳ ಬಳಿ ಯಾವುದೇ ದಾಖಲೆಗಳಿಲ್ಲ. ಹೀಗಾಗಿ ಅಪರಾಧ ವಿಭಾಗದಲ್ಲಿ ನನ್ನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಸಮನ್ಸ್ ಜಾರಿ ಮಾಡಿರುವ ಸಿಬಿಐ ಕ್ರಮ ಸರಿಯಲ್ಲ ಎಂದು ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಮನಮೋಹನ್ ಸಿಂಗ್ ಹೇಳಿದ್ದಾರೆ.

SCROLL FOR NEXT