ಲೀ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿರುವ ಮೋದಿ
ಸಿಂಗಾಪುರದ ಮೊದಲ ಪ್ರಧಾನಿ ಲೀ ಕ್ವಾನ್ ಹ್ಯೂ ಅವರ ಅಂತ್ಯ ಕ್ರಿಯೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ...
ನವದೆಹಲಿ: ಸಿಂಗಾಪುರದ ಮೊದಲ ಪ್ರಧಾನಿ ಲೀ ಕ್ವಾನ್ ಹ್ಯೂ ಅವರ ಅಂತ್ಯ ಕ್ರಿಯೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. 91 ವರ್ಷದ ಲೀ ಸೋಮವಾರ ಅಸುನೀಗಿದ್ದರು.
29ರಂದು ಲೀ ಅವರ ಅಂತ್ಯಕ್ರಿಯೆ ನಡೆಯಲಿದ್ದು, ಮೋದಿ ಸಿಂಗಾಪುರಕ್ಕೆ ತೆರಳಿ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ತಿಳಿಸಿದ್ದಾರೆ. `ದೂರದೃಷ್ಟಿಯ ರಾಜನೀತಿಜ್ಞ ಲೀ ಅವರ ಜೀವನ ಎಲ್ಲರಿಗೂ ಒಂದು ಪಾಠವಿದ್ದಂತೆ. ಅವರ ಮರಣ ವಾರ್ತೆ ಬಹು ಬೇಸರ ತಂದಿದೆ' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಲೀ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬ ಹಾಗೂ ಸಿಂಗಾಪುರದ ಜನತೆಗೆ ಸ್ಥೈರ್ಯ ನೀಡುವಂತೆ ಪ್ರಾರ್ಥಿಸುತ್ತೇನೆ ಎಂದು ಮೋದಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.