ಮಾಜಿ ಪ್ರಧಾನಿ ಮನಮೋಹನ್ ಸಿಂಗ್ 
ದೇಶ

ಏಪ್ರಿಲ್ 1ಕ್ಕೆ ಮನಮೋಹನ್ ಸಿಂಗ್ ಅರ್ಜಿ ವಿಚಾರಣೆ: ಸುಪ್ರೀಂಕೋರ್ಟ್

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿರುವುದನ್ನು ರದ್ದು ಮಾಡುವಂತೆ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ದಾಖಲಿಸಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅರ್ಜಿಯನ್ನು...

ನವದೆಹಲಿ: ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿರುವುದನ್ನು ರದ್ದು ಮಾಡುವಂತೆ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ದಾಖಲಿಸಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅರ್ಜಿಯನ್ನು ಸುಪ್ರೀಂಕೋರ್ಟ್ ಏಪ್ರಿಲ್ 1 ರಂದು ವಿಚಾರಣೆ ಕೈಗೆತ್ತಿಕೊಳ್ಳಲಿದೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅಧಿಕಾರಿಯೊಬ್ಬರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದಾಖಲಿಸಿರುವ ಅರ್ಜಿಯನ್ನು ವಿಚಾರಣೆಯ ಅರ್ಜಿಗಳೊಂದಿಗೆ ಈಗಾಗಲೇ ಸೇರಿಸಲಾಗಿದ್ದು. ಏಪ್ರಿಲ್ 1 ರಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

ಉದ್ಯಮಿ ಕುಮಾರ ಮಂಗಲಂ, ಪಿ.ಸಿ.ಪಾರಕ್ ಸೇರಿ 6 ಜನರಿಗೆ ಹಾಗೂ ಹಿಂಡಾಲ್ಕೋ ಸಂಸ್ಥೆಗೆ ಸೇರಿದ 8 ಕಂಪನಿಗಳಿಗೆ ಮಾ.11 ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಅಲ್ಲದೆ, ಮನಮೋಹನ್ ಸಿಂಗ್ ಅವರನ್ನು ಹಲವು ಬಾರಿ ವಿಚಾರಣೆಗೊಳಪಡಿಸಿತ್ತು.

ಸಿಬಿಐ ಜಾರಿ ಮಾಡಿದ ಸಮನ್ಸ್ ಕುರಿತಂತೆ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು, ಸಿಬಿಐ ಜಾರಿ ಮಾಡಿರುವ ಸಮನ್ಸ್ ಕಾನೂನು ಬದ್ಧವಾಗಿಲ್ಲ. ಸಿಬಿಐ ಅಧಿಕಾರಿಗಳು ಕಾನೂನು ರೀತಿಯ ನಿಯಮಗಳನ್ನು ಪಾಲಿಸಿಲ್ಲ. ಕಲ್ಲಿದ್ದಲು ಹಗರಣದಲ್ಲಿ ನಾನು ಭಾಗಿಯಾಗಿರುವುದಕ್ಕೆ ಸಿಬಿಐ ಅಧಿಕಾರಿಗಳ ಬಳಿ ಯಾವುದೇ ದಾಖಲೆಗಳಿಲ್ಲ. ಹೀಗಾಗಿ ಅಪರಾಧ ವಿಭಾಗದಲ್ಲಿ ನನ್ನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಸಮನ್ಸ್ ಜಾರಿ ಮಾಡಿರುವ ಸಿಬಿಐ ಕ್ರಮ ಸರಿಯಲ್ಲ. ಸಿಬಿಐ ಅವರು ಜಾರಿ ಮಾಡಿರುವ ಸಮನ್ಸ್ ನ್ನು ರದ್ದು ಮಾಡುವಂತೆ ಕೋರಿ ಮನಮೋಹನ್ ಸಿಂಗ್ ಅವರು ಬುಧವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ