ನವದೆಹಲಿ: ಆಮ್ ಆದ್ಮಿ ಪಕ್ಷದ ಆಂತರಿಕ ಭಿನ್ನಾಭಿಪ್ರಾಯಕ್ಕೆ ಬೇಸತ್ತು ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರು ಶನಿವಾರ ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಶನಿವಾರ ರಾಜಿನಾಮೆ ನೀಡಿದ್ದಾರೆ.
ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಾಯಕತ್ವವವನ್ನು ಪ್ರಶ್ನಿಸಿದ ಹಿನ್ನೆಲೆಯಲ್ಲಿ ಇಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಯಿಂದ ಯೋಗೇಂದ್ರ ಯಾದವ್ ಹಾಗೂ ಪ್ರಶಾಂತ್ ಭೂಷಣ್ ಅವರನ್ನು ಉಚ್ಚಾಟಿಸಲಾಗಿತ್ತು.
ಆಮ್ ಆದ್ಮಿ ಪಕ್ಷದ ಮೇಲೆ ತುಂಬಾ ವಿಶ್ವಾಸವಿಟ್ಟಿದ್ದೆ. ಆದರೆ ಇತ್ತೀಚೆಗಿನ ಬೆಳವಣಿಗೆಯಿಂದ ರೋಸಿ ಹೋಗಿ ಎಎಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಮೇಧಾ ಪಾಟ್ಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.