ದೇಶಾದ್ಯಂತ ಗೋಹತ್ಯೆ ನಿಷೇಧಕ್ಕೆ ಚಿಂತನೆ
ದೇಶಾದ್ಯಂತ ಗೋಹತ್ಯೆ ನಿಷೇಧ ಕಾನೂನು ತರಲು ಎನ್ಡಿಎ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ...
ಇಂದೋರ್: ದೇಶಾದ್ಯಂತ ಗೋಹತ್ಯೆ ನಿಷೇಧ ಕಾನೂನು ತರಲು ಎನ್ಡಿಎ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ.
ನಮ್ಮ ದೇಶದಲ್ಲಿ ಗೋಹತ್ಯೆ ಮಾಡುವಂತಿಲ್ಲ. ಗೋಹತ್ಯೆ ನಿಷೇಧಕ್ಕಾಗಿ ನಾವು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಗಣತಿಯನ್ನು ಮಾಡಲು ಉದ್ದೇಶಿಸಿದ್ದೇವೆ ಎಂದು ಸಿಂಗ್ ಹೇಳಿದ್ದಾರೆ.
ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿದೆ. ಹೀಗಿರುವಾಗ ಯಾರೊಬ್ಬರೂ ಗೋಹತ್ಯೆ ನಿಷೇಧ ಕಾನೂನಿನಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಭಾವಿಸುವುದು ಬೇಡ ಎಂದು ಸಚಿವರು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.