ಕಾಶ್ಮೀರದಲ್ಲಿ ಪ್ರವಾಹ (ಸಂಗ್ರಹ ಚಿತ್ರ) 
ದೇಶ

ನಿರಂತರ ಮಳೆ: ಕಾಶ್ಮೀರದಲ್ಲಿ ಪ್ರವಾಹ ಘೋಷಣೆ

ಕಳೆದ ಶನಿವಾರದಿಂದ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ತೀವ್ರ ಅಸ್ಯವ್ಯಸ್ಥವಾಗಿದ್ದು, ಕಾಶ್ಮೀರ ಸರ್ಕಾರ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯನ್ನು ಘೋಷಣೆ ಮಾಡಿದೆ...

ಶ್ರೀನಗರ: ಕಳೆದ ಶನಿವಾರದಿಂದ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ತೀವ್ರ ಅಸ್ಯವ್ಯಸ್ಥವಾಗಿದ್ದು, ಕಾಶ್ಮೀರ ಸರ್ಕಾರ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯನ್ನು ಘೋಷಣೆ ಮಾಡಿದೆ.

ಹವಾಮಾನ ಇಲಾಖೆಯ ವರದಿಗಳ ಪ್ರಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ 6 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ನದಿ ಅಂಚಿನ ಜನರು ಕೂಡಲೇ ಆ ಜಾಗವನ್ನು ತೊರೆದು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಸೂಚಿಸಿದೆ. ಇದೇ ವೇಳೆ ರಾಜ್ಯದಲ್ಲಿರುವ ಹಿಮನದಿಗಳಲ್ಲಿನ ನೀರಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಕಾಶ್ಮೀರ ಸರ್ಕಾರ ಪ್ರವಾಹ ಪರಿಸ್ಥಿತಿ ಘೋಷಣೆ ಮಾಡಿದೆ. ಅಲ್ಲದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಿಬ್ಬಂದ್ದಿಗಳಿಗೆ ಸರ್ಕಾರ ಸೂಚನೆ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ಸನ್ನದ್ಧವಾಗಿರುವಂತೆ ನಿರ್ದೇಶನ ನೀಡಿದೆ.

ಇದೇ ಏಪ್ರಿಲ್ 3ರಂದು ಕಾಶ್ಮೀರ ರಾಜ್ಯದಾದ್ಯಂತ ರಾತ್ರಿ ಇಡೀ ಭಾರಿ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ನೀಡಿರುವ ಎಚ್ಚರಿಕೆಯಿಂದಾಗಿ ಜನತೆ ಮತ್ತಷ್ಟು ಆತಂಕಕ್ಕೀಡಾಗುವಂತೆ ಆಗಿದೆ. ಇನ್ನು ಶ್ರೀನಗರ ಮತ್ತು ಜಮ್ಮುವಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದ್ದು, ಹೆದ್ದಾರಿಯನ್ನು  ಸಂಪೂರ್ಣ ಬಂದ್ ಮಾಡಲಾಗಿದೆ. ಇನ್ನು ರಾಜ್ಯದ 7 ಜಿಲ್ಲೆಗಳಲ್ಲಿ ಪ್ರವಾಹವಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಶನಿವಾರದಿಂದ ಸುರಿದಿರುವ ಮಳೆಯಿಂದಾಗಿ ಕೇಂದ್ರ ಬದಗಾಮ್ ಜಿಲ್ಲೆಯಲ್ಲಿ 8 ಮನೆಗಳು ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಇದಲ್ಲದೆ ಇತರೆ 26 ಮನೆಗಳು ಬಹುತೇಕ ಹಾನಿಗೀಡಾಗಿವೆ.

ಪರೀಕ್ಷೆಗಳು ಮುಂದಕ್ಕೆ
ಇನ್ನು ಸತತ ಮಳೆಯಿಂದಾಗಿ ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಕಾಶ್ಮೀರ ವಿಶ್ವವಿದ್ಯಾಲಯ ತನ್ನೆಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ. ಅಲ್ಲದೆ ತನ್ನೆಲ್ಲಾ ಸಿಬ್ಬಂದಿಗಳನ್ನು ಪ್ರವಾಹ ಕಾರ್ಯಾಚಾರಣೆಗೆ ನಿಯೋಜಿಸಿದೆ. ಇದೇ ವೇಳೆ ನಿನ್ನೆ ಮುಖ್ಯಮಂತ್ರಿ ಮುಪ್ಥಿ ಮೊಹಮದ್ ಸಯ್ಯೀದ್ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶ್ರೀನಗರಕ್ಕೆ ದೌಡಾಯಿಸಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ
ಇದೇ ವೇಳೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ನೂರಕ್ಕೂ ಹೆಚ್ಚು ವಿವಿಧ ಪಡೆಗಳು ಕಾಶ್ಮೀರ ರಾಜಧಾನಿ ಶ್ರೀನಗರಕ್ಕೆ ದೌಡಾಯಿಸಿದ್ದು, ಪ್ರವಾಹದ ಕುರಿತ ಮಾಹಿತ ಪಡೆಯುತ್ತಿದ್ದಾರೆ. ಅಲ್ಲದೆ ಇಂದಿನಿಂದಲೇ ರಕ್ಷಣಾ ಕಾರ್ಯಚಾರಣೆಯಲ್ಲಿ ಅವರು ತೊಡಗುವ ಸಾಧ್ಯ ಇದೆ ಎಂದು ಹೇಳಲಾಗುತ್ತಿದೆ.

ಒಟ್ಟಾರೆ ಕಳೆದ ವರ್ಷದ ಅಂತ್ಯದಲ್ಲಿ ಸಂಭವಿಸಿದ ಪ್ರವಾಹವನ್ನೇ ಇನ್ನೂ ಕಾಶ್ಮೀರದ ಜನತೆ ಮರೆತಿಲ್ಲ. ಅದಾಗಲೇ ಮತ್ತೊಮ್ಮೆ ಕಣಿವೆ ರಾಜ್ಯ ಪ್ರವಾಹಕ್ಕೆ ತುತ್ತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!