ಪುಣೆ: ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, 2013ರ ಭೂಸ್ವಾಧೀನ ಮಸೂದೆ ತಿದ್ದುಪಡಿ ಮಾಡಬೇಡಿ ಎಂದು ಕೇಳಿಕೊಂಡಿದ್ದಾರೆ.
ಎನ್ಡಿಎ ಸರ್ಕಾರದ ಭೂ ಸ್ವಾಧೀನ ಮಸೂದೆ ವಿರುದ್ಧ ಅಂದೋಲನ ನಡೆಸುತ್ತಿರುವ ಹಜಾರೆ ಅವರು, ಪ್ರಸ್ತುತ ಜಾರಿಯಲ್ಲಿರುವ ಭೂ ಸ್ವಾಧೀನ ಮಸೂದೆಗೆ ತಿದ್ದುಪಡಿ ತಂದು, 2013ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಸಿದ್ಧಪಡಿಸಿದ ಭೂ ಸ್ವಾಧೀನ ಮಸೂದೆಯನ್ನು ಜಾರಿಗೆ ತರಬೇಡಿ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಇತ್ತೀಚಿಗಷ್ಟೇ ವಿವಾದಾತ್ಮಕ ಭೂ ಸ್ವಾಧೀನ ಮಸೂದೆ ಬಗ್ಗೆ ಬಹಿರಂಗ ಚರ್ಚೆ ನಡೆಯಲಿ ಎಂದು ಅಣ್ಣಾ ಹಜಾರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೇಳಿದ್ದರು.
ಉದ್ದೇಶಿತ ಭೂ ಸ್ವಾಧೀನ ಮಸೂದೆ ಉದ್ಯಮಿಗಳ ಪರ ಹಾಗೂ ರೈತ ವಿರೋಧಿಯಾಗಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಪ್ರತಿಪಕ್ಷಗಳ ವಿರೋಧದ ನಡುವೆಯೂ ಮೋದಿ ಸರ್ಕಾರ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಿದ್ದು, ಈಗ ರಾಜ್ಯಸಭೆಯ ಅಂಗೀಕಾರಕ್ಕಾಗಿ ಕಾಯುತ್ತಿದೆ.